ಎಸ್‌ಐಟಿಗೆ ಸರ್ವ ಸ್ವಾತಂತ್ರ್ಯವನ್ನೂ ನೀಡಲಾಗಿದೆ: ಬೊಮ್ಮಾಯಿ

ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸರ್ವ ಸ್ವಾತಂತ್ರ್ಯವನ್ನೂ ನೀಡಲಾಗಿದೆ ಎಂದು ಗೃಹ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ನಡೆಯುತ್ತರುವುದರಿಂದ ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮೀಸಲಾತಿಗೆ ಒತ್ತಾಯಿಸಿ ಲಿಂಗಾಯತ ಪಂಚಮಸಾಲಿ ಸಮಾಜ ಸತ್ಯಾಗ್ರಹ ನಡೆಸುತ್ತಿದೆ. ಸೋಮವಾರದಿಂದ ಅಹೋರಾತ್ರಿ ಹೋರಾಟ ನಡೆಸುವ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ ಜತೆ ಈಗಾಗಲೇ ಮಾತನಾಡಿದ್ದೇನೆ. ಮತ್ತೆ ಮಾತನಾಡುತ್ತೇನೆ. ವಿಧಾನಸಭೆಯಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ವಿಷಯವನ್ನು ಸ್ಪಷ್ಟಪಡಿಸಿದ್ದೇನೆ ಎಂದು ಸಚಿವ ಬೊಮ್ಮಾಯಿ ಹೇಳಿದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement