
ಹೊನ್ನಾವರ: ಯಕ್ಷಗಾನದ ಪ್ರತಿಷ್ಠಿತ ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿಯನ್ನು ಖ್ಯಾತ ರಂಗಭೂಮಿ ಕಲಾವಿದೆ ಬಿ.ಜಯಶ್ರೀ ಹಾಗೂ ಕೆರೆಮನೆ ಗಜಾನನ ಹೆಗಡೆ ಹೆಸರಿನಲ್ಲಿ ಸ್ಥಾಪಿತವಾದ ಕೆರೆಮನೆ
ಗಜಾನನ ಹೆಗಡೆ ಪ್ರಶಸ್ತಿಗೆ ಪ್ರಸಿದ್ಧ ಯಕ್ಷಗಾನ ಭಾಗವತ ಕಪ್ಪೆಕೆರೆ ಸುಬ್ರಾಯ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೆರೆಮನೆ ಯಕ್ಷಗಾನ ಮಂಡಳಿ ನಿರ್ದೇಶಕ ಶಿವಾನಂದ ಹೆಗಡೆ ಕೆರೆಮನೆ ತಿಳಿಸಿದ್ದಾರೆ.
ಈ ಪ್ರಶಸ್ತಿ ಕಲೆ, ಸಂಸ್ಕೃತಿ, ಸಾಹಿತ್ಯ ಹೀಗೆ ಸಕಲ ಕಲಾಕ್ಷೇತ್ರಕ್ಕೆ ವಿಸ್ತಾರಗೊಂಡಿದ್ದು, 2004ರಲ್ಲಿ ಸ್ಥಾಪನೆಯಾಗಿದ್ದು,
ಈ ಪ್ರಶಸ್ತಿಯು 25 ಸಾವಿರ ನಗದು, ಪ್ರಶಸ್ತಿ ಪತ್ರ, ಇತರ ಗೌರವಗಳನ್ನು ಹೊಂದಿದೆ.
ಕೆರೆಮನೆ ಶಿವರಾಮ ಹೆಗಡೆಯವರ ಕಿರಿಯ ಪುತ್ರ, ಕೆರೆಮನೆ ಗಜಾನನ ಹೆಗಡೆ ಅವರ ಹೆಸರಿನಲ್ಲಿ ಕಳೆದ 8 ವರ್ಷದಿಂದ (2012) ಯಕ್ಷಗಾನ ಕ್ಷೇತ್ರಕ್ಕೆ ಮೀಸಲಾದ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯ 15 ಸಾವಿರ ನಗದು, ಪ್ರಶಸ್ತಿ ಪತ್ರ ಇತರ ಗೌರವಗಳನ್ನು
ಹೊಂದಿದೆ.
ಕಳೆದ 11 ವರ್ಷದಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ -12 ಬರುವ 2021ರ ಏಪ್ರಿಲ್ 2 ಮತ್ತು 3 ರಂದು ಹೊನ್ನಾವರ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಗುತ್ತದೆ. ಈ ನಾಟ್ಯೋತ್ಸವದಲ್ಲಿ ದೇಶದ ಶ್ರೇಷ್ಠ ಕಲಾ ಪರಿಣಿತರು, ಚಿಂತಕರು ಭಾಗವಹಿಸಲಿದ್ದಾರೆ. ಸಂಗೀತ, ನೃತ್ಯ, ಜನಪದ ಮುಂತಾದ ವಿವಿಧ ಪ್ರಕಾರಗಳ ವಿಶಿಷ್ಟ ಕಲಾತಂಡಗಳು ಭಾಗವಹಿಸಲಿವೆ.
.



ನಿಮ್ಮ ಕಾಮೆಂಟ್ ಬರೆಯಿರಿ