ವಿಮಾನ ಪ್ರಯಾಣಿಕರಿಗೆ ಹೊಸ ಕೊವಿಡ್‌ ಮಾ‌ರ್ಗಸೂಚಿ ಪ್ರಕಟ

ಚಿತ್ರ ಕೃಪೆ-ಇಂಟರ್ನೆಟ್‌

ನವ ದೆಹಲಿ: ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಶನಿವಾರ (ಮಾ.೧೩) ವಿಮಾನ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಈ ಮಾರ್ಗಸೂಚಿಯಂತೆ, ಪ್ರಯಾಣಿಕರು ಮಾಸ್ಕ್ ಧರಿಸದಿದ್ದರೆ ಅಥವಾ ಸೂಕ್ತ ಕೋವಿಡ್ ಸೂಚನೆ ಅನುಸರಿಸದಿದ್ದರೆ ಅವರನ್ನು ವಿಮಾನ ನಿಲ್ದಾಣದಿಂದ ಹೊರಗೆ ಕಳುಸಲಾಗುವುದು ಎಂದು ಖಡಕ್‌ ಸೂಚನೆ ನೀಡಿದೆ. ವಿಮಾನ ನಿಲ್ದಾಣಗಳಲ್ಲಿ ನಿಯೋಜಿಸಲಾಗಿರುವ ಭದ್ರತಾ ಸಿಬ್ಬಂದಿ ಪ್ರಯಾಣಿಕರು ಕೋವಿಡ್-19 ನಿಯಮಗಳನ್ನ ಪಾಲಿಸುತ್ತಾರೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಲು ಸೂಚಿಸಿದೆ.
ವಿಮಾನದಲ್ಲಿ ಪ್ರಯಾಣಿಕರು ಮಾಸ್ಕ್‌ ಧರಿಸಲು ನಿರಾಕರಿಸಿದರೆ ಅಥವಾ ಶಿಷ್ಟಾಚಾರಗಳನ್ನ ಉಲ್ಲಂಘಿಸಿದಲ್ಲಿ ಅಂಥ ಪ್ರಯಾಣಿಕರನ್ನ ‘ಅಸಭ್ಯ ಪ್ರಯಾಣಿಕ’ ಎಂದು ಪರಿಗಣಿಸಲಾಗುತ್ತದೆ ಎಂದು ಡಿಸಿಜಿಎ ಮಾರ್ಗಸೂಚಿಯಲ್ಲಿ ಹೇಳಿದೆ.
ಮಾಸ್ಕ್‌ ಧರಿಸದ ಪ್ರಯಾಣಿಕರನ್ನ ‘ನೋ ಫ್ಲೈ’ ಪಟ್ಟಿಗೆ ಸೇರಬೇಕು ಎಂದು ದೆಹಲಿ ಹೈಕೋರ್ಟ್ ಡಿಜಿಸಿಎಗೆ ಆದೇಶಿಸಿದ ಕೆಲ ದಿನಗಳ ಬಳಿಕ ಈ ಕ್ರಮ ಕೈಗೊಳ್ಳಲಾಗುತ್ತಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement