ಕಾಲೇಜಿಗೆ ರಜೆ ಎಂಬುದು ನಕಲಿ ಸುತ್ತೋಲೆ, ನಂಬಬೇಡಿ: ಸ್ಪಷ್ಟನೆ

ಬೆಂಗಳೂರು:ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ೧೫ ದಿನ ಕಾಲೇಜುಗಳಿಗೆ ರಜೆ ಎಂದು ಕಿಡಿಗೇಡಿಗಳು ನಕಲಿ ಸುತ್ತೋಲೆ ಹೊರಡಿಸಿದ್ದು, ಇದನ್ನು ವಿದ್ಯಾರ್ಥಿಗಳು ನಂಬಬಾರದು ಎಂದು ಉನ್ನತ ಶಿಕ್ಷಣ ಇಲಾಖೆ ತಿಳಿಸಿದೆ.
ಕಾಲೇಜು ಶಿಕ್ಷಣ ಇಲಾಖೆ ಹೆಸರಿನಲ್ಲಿ ಕಿಡಿಗೇಡಿಗಳು ‘ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಕೊರೊನಾ ವೈರಸ್ ರೋಗವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಲಾಖಾ ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ೧೫-೩-೨೦೨೧ರಿಂದ ೩೦-೦೩-೨೦೨೧ರ ವರೆಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲ ಕಾಲೇಜುಗಳ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ನಿರ್ವಹಿಸುವಂತೆ ಸೂಚಿಸಲಾಗಿದೆ’ ಎಂಬ ಒಕ್ಕಣೆಯೊಂದಿಗೆ ಸುತ್ತೋಲೆಯನ್ನು  ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ.ಈ ಬಗ್ಗೆ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟನೆ ನೀಡಿದ್ದು, ಸರ್ಕಾರದಿಂದಾಗಲೀ ಅಥವಾ ಇಲಾಖೆಯಿಂದಾಗಲೀ ಇಂತಹ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಇದು ನಕಲಿ ಸುತ್ತೋಲೆಯಾಗಿದ್ದು ಎಂದಿನಂತೆ ಕಾಲೇಜುಗಳಲ್ಲಿ ಪಾಠ ಪ್ರವಚನ ನಡೆಯಲಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಉನ್ನ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಮಾಧ್ಯಮಗಳಿಗೆ ಮಾಹಿತಿ ನೀಡಿ, ಕಾಲೇಜುಗಳಿಗೆ ರಜೆ ನೀಡಿಲ್ಲ. ಈ ಬಗ್ಗೆ ಗೊಂದಲಕ್ಕೆ ಒಳಗಾಗುವುದು ಬೇಡ. ನಕಲಿ ಸುತ್ತೋಲೆ ಹೊರಡಿಸಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸೈಬರ್ ಠಾಣೆಗೆ ದೂರು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement