
ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರದ ಸಮಯದಲ್ಲಿ ಗಾಯಗೊಂಡ ಕೆಲವು ದಿನಗಳ ನಂತರ ಗಾಲಿಕುರ್ಚಿಯಲ್ಲಿ ಭಾನುವಾರ ರೋಡ್ ಶೋ ನಡೆಸಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲಗಳು ತಿಳಿಸಿವೆ.
ಅವರು ಶನಿವಾರ ಮಧ್ಯಾಹ್ನ ಹಜ್ರಾದಲ್ಲಿ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವಾರದ ಆರಂಭದಲ್ಲಿ ಚುನಾವಣೆ ಪ್ರಚಾರದ ವೇಳೆ ಗಾಯಗೊಂಡ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ.ಚಿಕಿತ್ಸೆಯ ಬಳಿಕ ಮಾರ್ಚ್ 12 ರಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ಬಳಿಕ ಹೇಳಿಕೆ ಕೊಟ್ಟಿರುವ ಮಮತಾ ಬ್ಯಾನರ್ಜಿ, ಬೆಂಬಲಿಗರಲ್ಲಿ ಶಾಂತಿ ಕಾಪಾಡುವಂತೆ ಕರೆ ನೀಡಿದ್ದರು. ಅಲ್ಲದೆ ಒಂದೆರಡು ದಿನಗಳಲ್ಲಿ ಪ್ರಚಾರಕ್ಕೆ ಹಿಂತಿರುಗಲಿದ್ದು, ಅಗತ್ಯವಿದ್ದರೆ ವೀಲ್ ಚೇರ್ ಬಳಕೆ ಮಾಡುವುದಾಗಿ ಘೋಷಿಸಿದ್ದರು.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಾಯಗೊಂಡ ಘಟನೆ ಟಿಎಂಸಿ ಹಾಗೂ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ನಡುವೆ ಜಟಾಪಟಿಗೆ ಕಾರಣವಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ