ಡಿಕೆಶಿ ಹೇಳಿಕೆಗೆ ಅವರೇ ಉತ್ತರ ಕೊಡಬೇಕು: ಬೊಮ್ಮಾಯಿ

ಸಿಡಿ ಪ್ರಕರಣದಲ್ಲಿ ವ್ಯವಸ್ಥಿತವಾಗಿ ಸಿಲುಕಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿಕೆ ಬಗ್ಗೆ ಡಿಕೆಶಿ ವಿವರಣೆ ಕೊಡಬೇಕೇ ಹೊರತು ಅದಕ್ಕೆ ನಾನೇನು ಹೇಳುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸಿಡಿ ಪ್ರಕರಣದಲ್ಲಿ ಇನ್ನೊಬ್ಬರನ್ನು ಸಿಲುಕಿಸುವ ವಿಚಾರ ನನಗೆ ಗೊತ್ತಿಲ್ಲ. ಅದು ಡಿ.ಕೆ.ಶಿವಕುಮಾರ ಅವರ ವೈಯಕ್ತಿಕ ಹೇಳಿಕೆ. ಅದಕ್ಕೆ ನಾನು ಹೇಗೆ ವಿವರಣೆ ನೀಡಲು ಸಾಧ್ಯ. ಅವರ ಹೇಳಿಕೆಗೂ ನನಗೂ ಸಂಬಂಧವಿಲ್ಲ ಎಂದು ಬೊಮ್ಮಾಯಿ ಹೇಳಿದರು.
ಅಧಿವೇಶನದಲ್ಲಿ ಸಿಡಿ ವಿಚಾರ ಪ್ರಸ್ತಾಪಿಸಲಾಗುವುದು ಎಂದು ಕಾಂಗ್ರೆಸ್‌ ಮುಖಂಡ ಸಿದ್ದರಾಮಯ್ಯ ಹೇಳಿರುವುದು ನನ್ನ ಗಮನಕ್ಕೆ ಬಂದಿದೆ. ಅವರು ವಿಚಾರ ಪ್ರಸ್ತಾಪ ಮಾಡಲಿ ನಾವು ಅದರ ಕುರಿತು ಸೂಕ್ತ ಉತ್ತರ ನೀಡುತ್ತೇವೆ ಎಂದರು. ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ನಿಷೇಧಾಜ್ಞೆ ಜಾರಿ ಮಾಡುವ ಕುರಿತು ಇನ್ನೂ ಚರ್ಚೆ ಆಗಿಲ್ಲ. ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ಸ್ಥಿತಿ-ಗತಿ ಕುರಿತು ಚರ್ಚಿಸಲು ಸಭೆ ಕರೆದಿದ್ದು, ಸಭೆಯಲ್ಲಿ ಸಿಎಂ ಅವರ ಸಲಹೆಗಳನ್ನು ಪಡೆದುಕೊಂಡು ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement