ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಖುಷ್ಬೂ, ಅಣ್ಣಾಮಲೈ ಸ್ಪರ್ಧೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ನಟಿ ಖುಷ್ಬೂ ಸುಂದರ್, ಹಾಗೂ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರೂ ಸೇರಿದ್ದಾರೆ.
ತಮಿಳುನಾಡಿನ 20 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸುತ್ತಿದ್ದು, 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಡಿಸಲಾಗಿದೆ. ಈ ಪೈಕಿ ಅಣ್ಣಾಮಲೈ ಹಾಗೂ ಖುಷ್ಬೂ ಅವರ ಹೆಸರಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ನವ ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು. ಅಣ್ಣಾಮಲೈ ಅವರು ಅರವಕುರಿಚಿ ಕ್ಷೇತ್ರದಿಂಡಲೂ ಖುಷ್ಬೂ ಥೌಸಂಡ್ ಲೈಟ್ಸ್ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ.ಇನ್ನೊಂದೆಡೆ ಕಾರೈಕುಡಿ ಕ್ಷೇತ್ರದಿಂದ ಹೆಚ್. ರಾಜಾ ಹಾಗೂ ಧರ್ಮಪುರಂ ಕ್ಷೇತ್ರದಿಂದ ಮುರುಗನ್ ಕಣಕ್ಕಿಳಿಯಲಿದ್ದಾರೆ.

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಈ ಹಳ್ಳಿಯಲ್ಲಿರುವ ಮತದಾನ ಕೇಂದ್ರದ ಒಬ್ಬರೇ ಒಬ್ಬರು ಮತದಾರರಿಗಾಗಿ 40 ಕಿಮೀ ನಡೆದುಕೊಂಡು ಹೋದ ಚುನಾವಣಾ ಸಿಬ್ಬಂದಿ...!

ನಿಮ್ಮ ಕಾಮೆಂಟ್ ಬರೆಯಿರಿ

advertisement