ಪಶ್ಚಿಮ ಬಂಗಾಳ ಚುನಾವಣೆ: ಅಚ್ಚರಿ ನೀಡಿದ ಬಿಜೆಪಿ, ನಾಲ್ವರು ಸಂಸದರಿಗೆ ಟಿಕೆಟ್‌

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಬಿಜೆಪಿಯು 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು , ಮೂವರು ಹಾಲಿ ಲೋಕಸಭಾ ಸದಸ್ಯರು ಮತ್ತು ಒಬ್ಬ ರಾಜ್ಯಸಭಾ ಸದಸ್ಯರನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿಯನ್ನುಂಟು ಮಾಡಿದೆ.
ದಕ್ಷಿಣ ಕೊಲ್ಕತ್ತಾದ ಟೋಲಿಗುಂಗ್ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿಯಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾದ ಅರೂಪ್ ಬಿಸ್ವಾಸ್ ವಿರುದ್ಧ ಹಾಲಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಹೂಗ್ಲಿ ಜಿಲ್ಲೆಯ ತಾರಕೇಶ್ವರ ವಿಧಾನಸಭಾ ಕ್ಷೇತ್ರದಿಂದ ಹಾಲಿ ರಾಜ್ಯಸಭಾ ಸದಸ್ಯರಾಗಿರುವ ಸ್ವಪನ್ ದಾಸ್ ಗುಪ್ತಾ ಅವರಿಗೆ ಟಿಕೆಟ್‌ ನೀಡಿದೆ.
ಹೂಗ್ಲಿ ಲೋಕಸಭಾ ಕ್ಷೇತ್ರದ ಸಂಸದ ಲಾಕೆಟ್ ಚಟರ್ಜಿ ಅವರಿಗೆ ಅದೇ ಜಿಲ್ಲೆಯ ಚುಂಚುರಾ ಕ್ಷೇತ್ರದಿಂದ ಟಿಕೆಟ್ ನೀಡಿದೆ. ಲಾಕೆಟ್ ಚಟರ್ಜಿ ವಿರುದ್ಧ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಅಸಿತ್ ಮಜುಂದಾರ್ ಅಖಾಡಕ್ಕೆ ಇಳಿದಿದ್ದಾರೆ. ಕೂಚ್ ಬೆಹಾರ್ ಕ್ಷೇತ್ರದ ಸಂಸದರಾಗಿರುವ ನಿಶಿತ್ ಪ್ರಮಾಣಿಕ್ ಅವರನ್ನು ಜಿಲ್ಲೆಯ ದಿನ್ಹತಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement