ಸಿಡಿ ಪ್ರಕರಣದ ಯುವತಿಗೆ ನೋಟಿಸ್ ಜಾರಿ ಮಾಡಿದ ಪೊಲೀಸರು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಸಿಡಿ ಪ್ರಕರಣದ ಬಗ್ಗೆ ರಮೇಶ್ ಜಾರಕಿಹೊಳಿ ಶನಿವಾರ (ಮಾ.೧೩) ದೂರು ದಾಖಲಿಸಿದ ಬೆನ್ನಲ್ಲೇ ಯುವತಿ ವಿಡಿಯೋ ಬಿಡುಗಡೆ ಮಾಡಿ ಹೇಳಿಕೆ ನೀಡಿದ್ದಳು. ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವ ಬೆದರಿಕೆಯಿದೆ. ರಕ್ಷಣೆ ನೀಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಳು.
ಈ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಯುವತಿ ಹಾಗೂ ಆಕೆ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡುವಂತೆ ಎಸ್ಐ‌ಟಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಈಗ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಯುವತಿ ವಾಸವಾಗಿದ್ದ ಮನೆ ಹಾಗೂ ಆಕೆಯ ಸ್ನೇಹಿತರಿಗೂ ಪೊಲೀಸರು ನೋಟಿಸ್ ತಲುಪಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement