ಸಿಡಿ ಪ್ರಕರಣ: ಮಹಾನ್‌ ನಾಯಕ ಅಂದ್ರೆ ತಾವೇ ಎಂದು ಡಿಕೆಶಿ ಯಾಕೆ ತಿಳ್ಕೊಂಡ್ರೋ ಗೊತ್ತಿಲ್ಲ

ಮೈಸೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ ಅವರ ಹೆಸರು ಹೇಗೆ ಬಂತೋ ನನಗೆ ಗೊತ್ತಿಲ್ಲ. ರಮೇಶ ಜಾರಕಿಹೊಳಿ ಮಹಾನಾಯಕರು ಎಂದು ಹೇಳಿದ್ದನ್ನು ಡಿ.ಕೆ. ಶಿವಕುಮಾರ ತಮಗೇಕೆ ಅನ್ವಯಿಸಿಕೊಂಡರೋ ಎಂಬದೂ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಯಾರು ಹೇಳಿದ್ದಾರೆ? ಯಾರೂ ಹೇಳಿಲ್ಲ. ಆದರೆ ಅವರು ತಮ್ಮ ಹೆಸರನ್ನು ಅವರೇ ಏಕೆ ಅನ್ವಯಿಸಿಕೊಂಡಿದ್ದಾರೆ?. ರಾಜ್ಯದಲ್ಲಿ ಎಷ್ಟೋ ಜನ ಮಹಾನ್ ನಾಯಕರಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ರಮೇಶ ಜಾರಕಿಹೊಳಿ ಯಾವರ್ಥದಲ್ಲಿ ಯಾವ ಮಹಾನ್ ನಾಯಕರು ಎಂದು ಹೇಳಿದ್ದಾರೆಂಬುದು ಗೊತ್ತಿಲ್ಲ.ಶಿವಕುಮಾರ ಅವರು ತಾವೇ ಎಂದು ಯಾಕೆ ಅಂದುಕೊಂಡರೋ ಅದೂ ಗೊತ್ತಿಲ್ಲ. ನಿನ್ನೆ ದುಡುಕಿ ಅವರ ಹೆಸರನ್ನು ಅವರೇ ಹೇಳಿದ್ದಾರೆ. ಯಾಕೆ ಈ ಪ್ರಕರಣಕ್ಕೆ ಅವರ ಹೆಸರು ಸಿಲುಕಿಸಿಕೊಳ್ಳಲು ಹೊರಟಿದ್ದಾರೆಯೋ ಅದೂ ಗೊತ್ತಿಲ್ಲ ಎಂದರು.
ಈ ಪ್ರಕರಣದ ಬಗ್ಗೆ ಎಲ್ಲರೂ ಹುಡುಗಾಟಿಕೆಯಾಗಿ ತೆಗೆದುಕೊಂಡಿದ್ದಾರೆ. ಪ್ರಕರಣದ ಬಗ್ಗೆ ಯಾರಿಗೂ ಗಂಭೀರತೆ ಇಲ್ಲ, ಈ ಪ್ರಕರಣದಿಂದ ರಾಜ್ಯದ ಮಾನ ಹಾಳಾಗುತ್ತಿದೆ. ರಾಜ್ಯದ ಮಾನ ಉಳಿಸಲು ನಿಷ್ಪಕ್ಷಪಾತ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಿಡಿಯ ಸಂತ್ರಸ್ತ ಮಹಿಳೆಗೆ ಯಾರಿಂದ ರಕ್ಷಣೆ ಸಿಗಬೇಕಿತ್ತೋ ಅದು ಸಿಕ್ಕಿದೆ. ಸರ್ಕಾರದಿಂದ ಅವಳನ್ನು ಹುಡುಕಲು ಆಗದಿದ್ದರೂ, ಹಿಂದೆ ಇರುವವರು ಎಲ್ಲಾ ಬಗೆಯ ರಕ್ಷಣೆ ಕೊಟ್ಟಿದ್ದಾರೆ. ಸರ್ಕಾರಕ್ಕೆ ಅವಳಿ ಸನಿವಾರ ವೀಡಿಯೋ ರೆಕಾರ್ಡ್ ಹೇಳಿಕೆ ಕಳುಹಿಸಿದ್ದಾಳೆ. ಬೇರೆ ಯಾರಾದರೂ ರೆಕಾರ್ಡ್ ಮಾಡಿ ಕಳುಹಿಸಿದ್ದಾರೋ ಎಂಬುವುದು ತನಿಖೆಯಿಂದಷ್ಟೇ ಹೊರ ಬರಬೇಕು ಎಂದು ತಿಳಿಸಿದರು.
ಅವಳಿಗೆ ಸರ್ಕಾರ ರಕ್ಷಣೆ ಕೊಟ್ಟಿದೆಯೋ ಅಥವಾ ರಮೇಶ್ ಜಾರಕಿಹೊಳಿ ವಿರುದ್ಧ ಇರುವವರು ಕೊಟ್ಟಿದ್ದಾರೆಯೋ ಗೊತ್ತಿಲ್ಲ. ಸರ್ಕಾರ ರಚನೆಗೆ ಈತನ ಸಹಾಯ ಪಡೆದವರು, ಈತನ ಸ್ಪೀಡ್ ಕಟ್ ಮಾಡಲಿಕ್ಕೆ ಮಾಡಿದ್ದಾರೆಯೋ ಎಂಬುದು ನನಗೆ ಗೊತ್ತಿಲ್ಲ. ಅಧಿಕಾರಿಗಳು ರಾಜ್ಯದ ಗೌರವ ಉಳಿಸಲು ನಿಷ್ಪಕ್ಷಪಾತ ತನಿಖೆ ಮಾಡಬೇಕು ಎಂದು ಹೇಳಿದರು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement