ಸೇನೆ ಅಧಿಕಾರಿಗಳ ನೇಮಕದಲ್ಲಿ ಭ್ರಷ್ಟಾಚಾರ ಆರೋಪ: ಸಿಬಿಐ ತನಿಖೆಗೆನಿರ್ಧಾರ

ಚಿತ್ರ ಕೃಪೆ-ಇಂಟರ್ನೆಟ್

ಪಂಜಾಬ್‌ನ ಕಪೂರ್ಥಲಾ ಜಿಲ್ಲೆಯಲ್ಲಿ ನಡೆಯುತ್ತಿರುವ ಸೇನಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರದ ಆರೋಪಗಳ ಕುರಿತು ಸಿಬಿಐ ತನಿಖೆ ನಡೆಸಲು ಭಾರತೀಯ ಸೇನೆ ನಿರ್ಧರಿಸಿದೆ.
ಮೂರು ಸೇವೆಗಳಲ್ಲಿ ಅಧಿಕಾರಿಗಳಾಗಿ ಆಯ್ಕೆಯಾಗಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸೇವಾ ಆಯ್ಕೆ ಕೇಂದ್ರಗಳು ಸೇವಾ ಆಯ್ಕೆ ಮಂಡಳಿಯ ಪರೀಕ್ಷೆಗಳನ್ನು ನಡೆಸುತ್ತವೆ. ಸೇನಾ ಗುಪ್ತಚರ ಸಂಸ್ಥೆಗಳ ಪೂರ್ವಭಾವಿ ಕಾರ್ಯಾಚರಣೆಯ ಆಧಾರದ ಮೇಲೆ, ಸೇವೆಗಳ ಆಯ್ಕೆ ಕೇಂದ್ರದಲ್ಲಿ ಆಯ್ಕೆ ಕಾರ್ಯವಿಧಾನಗಳಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ. ಈ ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸಲು ಭಾರತೀಯ ಸೇನೆಯು ನಿರ್ಧರಿಸಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಸೇನೆಗೆ ಸೂಕ್ತ ಅಭ್ಯರ್ಥಿಗಳ ಆಯ್ಕೆಗಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರದ ಆರೋಪವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಇದು ನಮ್ಮ ಗಮನಕ್ಕೆ ಬಂದಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾನೆ ಅವರು ತಮ್ಮ ಹಣಕಾಸಿನ ಅವ್ಯವಹಾರವನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಮುಕುಂದ ಕಮಾಂಡರ್‌ಗಳಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement