ಬೆಂಗಳೂರು: ರಾಜ್ಯದಲ್ಲಿ ಕಳೆದ 24 ತಾಸಿನಲ್ಲಿ 934 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 609 ಮಂದಿ ಅಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಂದು ದಿನದಲ್ಲಿ ಮೂವರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 8,354 ಆಗಿದೆ.ರಾಜಧಾನಿ ಬೆಂಗಳೂರಿನಲ್ಲಿ 628 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, 371 ಸೋಂಕಿತರು ಬಿಡುಗಡೆ ಆಗಿದ್ದಾರೆ. ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6107ಕ್ಕೆ ಏರಿಕೆಯಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ