ಐಸಿಸ್ ಸಂಪರ್ಕ: ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ಎನ್‌ಐಎ ದಾಳಿ..!

ನವ ದೆಹಲಿ: ಐಸಿಸ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ಕರ್ನಾಟಕ, ಕೇರಳ ಹಾಗೂ ದೆಹಲಿಯ 10 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದುಕೊಂಡಿದೆ.
ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊಂದಿಗೆ ಕೆಲವರು ವೈಯಕ್ತಿಕ ಸಂಪರ್ಕ ಇಟ್ಟುಕೊಂಡಿದ್ದು, ದೇಶದ್ರೋಹ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಎನ್‍ಐಎ ತಂಡ ಏಕಕಾಲಕ್ಕೆ ಮೂರು ರಾಜ್ಯಗಳ 10 ಸ್ಥಳಗಳ ಮೇಲೆ ಸೋಮವಾರ ಮುಂಜಾನೆ ದಾಳಿ ನಡೆಸಿದೆ.
ದಾಳಿ ಸಂದರ್ಭದಲ್ಲಿ ಎನ್‍ಐಎ ಅಧಿಕಾರಿಗಳು ಐದು ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ಸಮುದಾಯಕ್ಕೆ ಸೇರಿದ ಪ್ರಭಾವಿ ಯುವಕರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ಅವರಿಗೆ ಆನ್‍ಲೈನ್ ತರಬೇತಿ ನೀಡಿ ಅವರಿಂದ ಭಾರತದಲ್ಲಿ ವಿದ್ರೋಹ ನಡೆಸಲು ಪಾಕಿಸ್ತಾನ ಸಂಚು ರೂಪಿಸಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ
ಪ್ರಕರಣ ದಾಖಲಿಸಿದ ಕೇವಲ 48 ಗಂಟೆಗಳಲ್ಲೇ ಆ ಅಧಿಕಾರಿಗಳು ಏಕ ಕಾಲಕ್ಕೆ ಮೂರು ರಾಜ್ಯಗಳ ಹಲವಾರು ಪ್ರದೇಶಗಳ ಮೇಲೆ ದಾಳಿ ನಡೆಸಿದ್ದಾರೆ.ದಾಳಿ ಸಂದರ್ಭದಲ್ಲಿ ವಶಕ್ಕೆ ಪಡೆದ ಐವರನ್ನು ತೀವ್ರ ವಿಚಾರಣೆಗೆ ಗುರಿಪಡಿಸಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಕುಮಟಾ : ಅಘನಾಶಿನಿ ನದಿಗೆ ಅಡ್ಡವಾಗಿ ನಿರ್ಮಾಣವಾಗುತ್ತಿದ್ದ ಸೇತುವೆಯ ಸ್ಲ್ಯಾಬ್‌ ಕುಸಿತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement