ಕರ್ನಾಟಕ: ದೈನಂದಿನ ಕೊರೊನಾ  ಸೋಂಕು 932, ಸಾವು 7 

ಬೆಂಗಳೂರು: ಕಳೆದ 24 ತಾಸಿನಲ್ಲಿ ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 932 ಜನರಿಗೆ ಸೊಂಕು ದೃಢ ಪಟ್ಟಿದೆ. 7 ಜನ ಮೃತಪಟ್ಟಿದ್ದು, ಬೆಂಗಳೂರು ನಗರ ದಲ್ಲಿ 5 ಮಂದಿ ಮೃತಪಟ್ಟಿದ್ದಾರೆ ಮೈಸೂರು ಹಾಗೂ ಬೀದರಿಲ್ಲಿ ತಲಾ ಒಬ್ಬ ಸೋಂಕಿತರು ಮೃತಪಟ್ಟಿದ್ದಾರೆ.
ಸೋಮವಾರ 429 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ961204ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟು939928 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ. ಮತ್ತು ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 8860 ಸಕ್ರಿಯ ಸೋಂಕು ಪ್ರಕರಣಗಳಿವೆ. ಸೋಂಕಿನಿಂದ ಈವರೆಗೆ 12397 ಜನ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ 125 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 550 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರಲ್ಲಿ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಕೋವಿಡ್‌ ಸೋಂಕಿತ ವ್ಯಕ್ತಿ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement