ಕುಮಾರಸ್ವಾಮಿಯವರೇ ಶಕುನಿ, ಮಂಥರೆಯಂಥವರ ಮಾತನ್ನು ದಯವಿಟ್ಟು ಕೇಳಬೇಡಿ: ಮಾರ್ಮಿಕವಾಗಿ ಹೇಳಿದ ಜಿಟಿಡಿ

ಮೈಸೂರು: ಎಚ್‌.ಡಿ.ಕುಮಾರಸ್ವಾಮಿಯವರೇ ನೀವು ಶಕುನಿ, ಮಂಥರೆಯಂಥವರ ಮಾತನ್ನು ದಯವಿಟ್ಟು ಕೇಳಬೇಡಿ ಎಂದು ಚಾಮುಂಡೇಶ್ವರಿ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಶಾಸಕ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ.
ಮೈಸೂರಿನಲ್ಲಿ ಆತನಾಡಿದ ಅವರು, ಶಕುನಿ ಕೌರವನ ಜೊತೆ ಸೇರಿ ಕೌರವ ವಂಶವನ್ನೇ ನಾಶ ಮಾಡಿದ ಉದಾಹರಣೆಯಿದೆ. ಮಂಥರೆ ರಾಮನ ಪಟ್ಟಾಭಿಷೇಕ ತಪ್ಪಿಸಿ ಕಾಡಿಗೆ ಕಳುಹಿಸಿದಳು. ಕುಮಾರಸ್ವಾಮಿಯವರೇ ನಾಟಕದಲ್ಲಿ ಹೇಳುವ ಈ ಪ್ರಸಂಗಗಳಂತೆ ತಾವು ದಯವಿಟ್ಟು ನಡೆದುಕೊಳ್ಳಬೇಡಿ. ನೀವು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ಅರ್ಥಪೂರ್ಣ ರೀತಿಯಲ್ಲಿ ನಾನು ಹೇಳಿದ್ದನ್ನು ತಿಳಿದುಕೊಳ್ಳಿ. ಸಾ.ರಾ. ಮಹೇಶ ಅವರು ಹೇಳಿದ್ದನ್ನೇ ಕಾಪಿ, ಜೆರಾಕ್ಸ್ ಹೊಡೆಯಲು ಹೋಗಬೇಡಿ. ನಿಮ್ಮ ನಾಯಕತ್ವಕ್ಕೆ ರಾಜ್ಯದಲ್ಲಿ ಬೆಲೆ ಇದೆ” ಎಂದು ಮಅರ್ಮಿಕವಾಗಿ ಹೇಳಿದರು.
ಕುಮಾರಸ್ವಾಮಿ ಅವರು ಜಿ.ಟಿ.ದೇವೇಗೌಡ ಅವರ ಬೇರು ಕೀಳುತ್ತಿಲ್ಲ. ಜೆಡಿಎಸ್ ಬೇರುಗಳನ್ನು ಬುಡಸಮೇತ ತೆಗೆಯುತ್ತಿದ್ದಾರೆ. ಮೈಮುಲ್ ಚುನಾವಣೆಯನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಊರೂರಿಗೆ ಹೋಗಿ ಪ್ರಚಾರವನ್ನೂ ಮಾಡದೆ ಮನೆಯಲ್ಲಿ ಕುಳಿತಿದ್ದೇನೆ. ನೀವು ತಾಲ್ಲೂಕುಗಳನ್ನು ಸುತ್ತುತ್ತಿದ್ದೀರಿ. ನನ್ನನ್ನು ನಾನು ಎಲ್ಲಿಯೂ ಆಲದಮರ ಎಂದು ಕರೆದುಕೊಂಡಿಲ್ಲ. ಆದರೆ ನನ್ನ ವಿರುದ್ಧ ನೀವು ತಾಲ್ಲೂಕುಗಳಿಗೆ ಹೋಗಿ ಮಾತನಾಡಿದ್ದೀರಿ ಎಂದರು.
ಪಿರಿಯಾಪಟ್ಟಣದಲ್ಲಿ ಶಾಸಕ ಮಹದೇವು ಸಂಕಷ್ಟ ಕಾಲದಲ್ಲೂ ಜೆಡಿಎಸ್ ನಲ್ಲೇ ಉಳಿದುಕೊಂಡರು. ಅವರ ಮಗನ ವಿರುದ್ಧ ನೀವು ಪ್ರಚಾರ ಮಾಡಿದ್ದೀರಿ. ಜೆಡಿಎಸ್ ಬದಲು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದ್ದೀರಿ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಶಾಸಕ ಸಾ.ರಾ ಮಹೇಶ ಅವರ ಛತ್ರಕ್ಕೆ ಬಂದು ನನ್ನನ್ನು ಜೆಡಿಎಸ್ ನಿಂದ ಹೊರಗೆ ಹಾಕುತ್ತೇವೆ ಎಂದು ಹೇಳಿದ್ದೀರಿ. ಪದೇ ಪದೇ ನನ್ನನ್ನು ಯಾಕೆ ಅವಮಾನ ಮಾಡುತ್ತೀರಿ. ನಾನು ಈಗಲೂ ಜೆಡಿಎಸ್ ನಲ್ಲೇ ಇದ್ದೇನೆ. ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕರ ಸಾಲಿನಲ್ಲೇ ನನಗೆ ಖುರ್ಚಿ ಇದೆ” ಎಂದು ಟಾಂಗ್‌ ನೀಡಿದರು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement