ಭಾರತದಲ್ಲಿ 26 ಸಾವಿರ ದಾಟಿದ ದಿನವೊಂದರ ಕೊರೊನಾ ಸೋಂಕು..!

ನವ ದೆಹಲಿ: ದೇಶದಲ್ಲಿ ದಿನದಿನವೂ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ.
ಕಳೆದ 24ಗಂಟೆಯಲ್ಲಿ 26,291 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕಳೆದ ಮೂರು ತಿಂಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟು ಪ್ರಮಾಣದ ಸೋಂಕಿತರು ಒಂದೇ ದಿನ ಪತ್ತೆಯಾಗಿದ್ದಾರೆ.
2020ರ ಡಿಸೆಂಬರ್​ 20ರಂದು 26,624 ಕೊರೊನಾ ಸೋಂಕಿನ ಕೇಸ್​ಗಳು ದಾಖಲಾಗಿದ್ದವು. ಭಾನುವಾರ 25,320 ಪ್ರಕರಣಗಳು ದಾಖಲಾಗಿದ್ದವು. ಸೋಮವಾರ ಸುಮಾರು ಸಾವಿರ ಪ್ರಕಣಗಳು ಹೆಚ್ಚಳ ಕಂಡಿವೆ.
ಫೆಬ್ರುವರಿ ಕೊನೇ ವಾರದಿಂದಲೂ ಒಂದು ದಿನದಲ್ಲಿ ದಾಖಲಾಗುವ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ದೇಶದ ಒಟ್ಟು ಸೋಂಕಿತರ ಸಂಖ್ಯೆ 1,13,85,339ಕ್ಕೆ ತಲುಪಿದೆ. ಅದರಲ್ಲಿ 2,19,262 ಸಕ್ರಿಯ ಪ್ರಕರಣಗಳಾಗಿವೆ. ಹಾಗೇ 24 ಗಂಟೆಯಲ್ಲಿ 118 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1,58,725 ತಲುಪಿದೆ. 7,445 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ವ್ಯಾಕ್ಸಿನೇಶನ್​ ಹೆಚ್ಚಳ:
ದೇಶದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ ಅಭಿಯಾನ ಭರದಿಂದ ಸಾಗುತ್ತಿದೆ. ಜ.16ರಿಂದ ಮೊದಲ ಹಂತದಲ್ಲಿ, ಕೊವಿಡ್​ -19 ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿತ್ತು. ಅದಾದ ಬಳಿಕೆ 2ನೇ ಹಂತದ ಲಸಿಕೆ ವಿತರಣೆ ಫೆ.2ರಿಂದ ಶುರುವಾಗಿದೆ. ಸದ್ಯ 60ವರ್ಷ ಮೇಲ್ಪಟ್ಟವರಿಗೆ, 45 ವರ್ಷ ಮೇಲ್ಪಟ್ಟು, ಇತರೆ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 2,99,08,038 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.

ಪ್ರಮುಖ ಸುದ್ದಿ :-   "ನನ್ನ 90 ಸೆಕೆಂಡುಗಳ ಭಾಷಣವು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಮೂಡಿಸಿದೆ" : ಪ್ರಧಾನಿ ಮೋದಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement