ಸಂಜನಾ ಗಣೇಶನ್ -ಭಾರತದ ವೇಗಿ ಬುಮ್ರಾ ಮದುವೆ

ಕ್ರಿಕೆಟಿಗ ಬುಮ್ರಾ

ನವ ದೆಹಲಿ: ಟೀಮ್ ಇಂಡಿಯಾದ ವೇಗಿ ಜಸ್‌ಪ್ರೀತ್ ಬುಮ್ರಾ, ಕ್ರಿಕೆಟ್ ನಿರೂಪಕಿ ಸಂಜನಾ ಗಣೇಶನ್ ಗೋವಾದಲ್ಲಿ ಮದುವೆಯಾಗಿದ್ದಾರೆ.
ವಿವಾಹ ಸಮಾರಂಭದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬುಮ್ರಾ ತಮ್ಮ ಮದುವೆ ಪೋಟೋಗಳನ್ನು ಹಂಚಿಕೊಂಡಿದ್ದಾರೆ.
27 ವರ್ಷದ ಬುಮ್ರಾ, ‘ಪ್ರೀತಿಯ ಜತೆಗೆ ನಾವಿಬ್ಬರು ಜತೆಯಾಗಿ ಹೊಸ ಪ್ರಯಾಣವನ್ನು ಆರಂಭಿಸುತ್ತಿದ್ದೇವೆ. ಇಂದು ನಮ್ಮ ಬದುಕಿನ ಅತ್ಯಂತ ಸಂತೋಷದ ದಿನ. ನಮ್ಮ ಮದುವೆಯ ಈ ಸುದ್ದಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿರುವುದಕ್ಕೆ ನಮಗೆ ಖುಷಿಯಾಗುತ್ತಿದೆ. ಎಂದು ಮದುವೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಕ್ರಿಕೆಟ್ ಕಾರ್ಯಕ್ರಮಗಳ ನಿರೂಪಕಿಯಾಗಿ ಈಗಾಗಲೆ ಸಾಕಷ್ಟು ಗಮನ ಸೆಳೆದಿರುವ ಸಂಜನಾ ಗಣೇಶನ್, ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲೂ ಭಾಗವಹಿಸಿದ್ದರು ಮತ್ತು ರೂಪದರ್ಶಿಯೂ ಆಗಿದ್ದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   "ನನ್ನ 90 ಸೆಕೆಂಡುಗಳ ಭಾಷಣವು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಮೂಡಿಸಿದೆ" : ಪ್ರಧಾನಿ ಮೋದಿ

ನಿಮ್ಮ ಕಾಮೆಂಟ್ ಬರೆಯಿರಿ

advertisement