ಸದನದಲ್ಲಿ ಸಿಎಂ ಭರವಸೆ: ಪಂಚಮಸಾಲಿ ಮೀಸಲು ಹೋರಾಟ ತಾತ್ಕಾಲಿಕ ಕೈಬಿಟ್ಟ ಸ್ವಾಮೀಜಿ

ಬೆಂಗಳೂರು: ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೋರಿ ಕೂಡಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದೆ.

ಇದನ್ನು ಖಚಿತ ಪಡಿಸಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಸರ್ಕಾರ ಈ ನಿಟ್ಟಿನಲ್ಲಿ ಪ್ರಯತ್ನಿಸುವ ಸ್ಪಷ್ಟ ಭರವಸೆ ನೀಡಿದ ಹಿನ್ನೆಲೆಯಲ್ಲಿ ‘ಪಂಚಮಸಾಲಿ ಮೀಸಲಾತಿ ಹೋರಾಟವನ್ನ ತಾತ್ಕಾಲಿಕವಾಗಿ ಕೈಬಿಡುತ್ತಿದ್ದೇವೆ ಎಂದರು.
ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ಸದನದಲ್ಲಿ ಪಂಚಮಸಾಲಿ ೨ಎ ಮೀಸಲಾತಿ ಅವಶ್ಯಕತೆ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಈ ಬಗ್ಗೆ ನೇಮಿಸಿರುವ ವರದಿಯನ್ನು ಆರು ತಿಂಗಳೊಳಗೆ ನೀಡುವಂತೆ ಸೂಚಿಸಲಾಗುವುದು, ವರದಿ ಬಂದ ನಂತರ ಸರ್ಕಾರ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತದೆ ಎಂಬ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸದನದಲ್ಲಿ ಭರವಸೆ ನೀಡಿದ್ದಾರೆ. ಹೀಗಾಗಿ ನಮ್ಮ ಈ ಹೋರಾಟವನ್ನು ತಾತ್ಕಾಲಿಕವಾಗಿ ಕೈಬಿಡಲಅಗುವುದು. ಮುಖ್ಯಮಂತ್ರಿಗಳು ಆರು ತಿಂಗಳೊಳಗೆ ವರದಿ ತರಿಸಿಕೊಂಡು ಈ ಬಗ್ಗೆ ಕ್ರಮಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸುತ್ತಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಸಚಿವ ಸಿ.ಸಿ. ಪಾಟೀಲ್, ಶಾಸಕರಾದ ಬಸವರಾಜ ಪಾಟೀಲ್ ಯತ್ನಾಳ್, ರೇಣುಕಾಚಾರ್ಯ  ಸೇರಿ ಅನೇಕರು ಭೇಟಿ ಮಾಡಿದರು. ಧರಣಿ ಸತ್ಯಾಗ್ರಹವನ್ನು ಕೈಬಿಡಿ ಎಂದು ಸ್ವಾಮೀಜಿಯವರಿಗೆ ಮನವಿ ಮಾಡಿದರು.

 

ನಂತರ ಹೋಳಿಗೆ ತಿನ್ನಿಸುವ ಮೂಲಕ ಧರಣಿಯನ್ನು ಅಂತ್ಯಗೊಳಿಸಲಾಯಿತು. ಆರು ತಿಂಗಳವರೆಗೆ ಕಾದುನೋಡುವ, ನಂತರ ಮುಂದಿನ ನಿರ್ಧಾರ ಕೈಗೊಳ್ಳುವ ತೀರ್ಮಾನ ಮಾಡಲಾಯಿತು.

4.4 / 5. 7

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement