ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ನಾಥಮ್ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಹಾಗೂ ಎಐಎಡಿಎಂಕೆ ಅಭ್ಯರ್ಥಿ ಆರ್. ವಿಶ್ವನಾಥನ್ ಮತದಾರರಿಗೆ ಹಣ ವಿತರಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವಿಶ್ವನಾಥಮ್ ತಮ್ಮ ಜೇಬಿನಿಂದ ನೋಟುಗಳನ್ನು ತೆಗೆದು ಮತದಾರರಿಗೆ ನೀಡುತ್ತಿರುವ ದೃಷ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಹಿಳೆಯರ ಗುಂಪು ಸಾಂಪ್ರದಾಯಿಕ ಸ್ವಾಗತಕ್ಕೆ ಆರತಿ ಮಾಡಲು ಅವರ ಸುತ್ತ ನಿಂತಿದ್ದು, ಮಾಜಿ ಸಚಿವರು ಹಣ ನೀಡುತ್ತಿರುವುದು ಕಂಡುಬಂದಿದೆ.
ಕ್ಷೇತ್ರದ ಡಿಎಂಕೆ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಆಂಡಿ ಅಂಬಾಲಂ ಚುನಾವಣಾ ಅಧಿಕಾರಿಗೆ ಈ ಕುರಿತು ದೂರು ನೀಡಿದ್ದಾರೆ.
ಮಾಜಿ ಸಚಿವರ ವಿರುದ್ಧ ನಾಥಮ್ ಪೊಲೀಸ್ ಠಾಣೆಯಲ್ಲಿ ಚುನಾವಣಾ ಆಯೋಗದ ವಿಡಿಯೋ ಕಣ್ಗಾವಲು ತಂಡವು ನೀಡಿರುವ ದೂರನ್ನು ಪರಿಶೀಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ದಿಂಡಿಗಲ್ ಜಿಲ್ಲಾಧಿಕಾರಿ ಎಂ.ವಿಜಯಲಕ್ಷ್ಮಿ ತಿಳಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ