ಕರ್ನಾಟಕದಲ್ಲಿ ಸಾವಿರ ಗಡಿದಾಟಿದ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ…!!

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಕೂಡ ಕೊರೊನಾದಲ್ಲಿ ಭಾರೀ ಹೆಚ್ಚಳವಾಗಿದ್ದು, ಸಾವಿರದ ಗಡಿ ದಾಟಿದೆ…!
ಕಳೆದ ೨೪ ತಾಸಿನಲ್ಲಿ ದೈನಂದಿನ ಕೊರೊನಾ ಪ್ರಕರಣ 1135 ದಾಖಲಾಗಿದ್ದು, ಸರ್ಕಾರದ ಚಿಂತೆಗೆ ಕಾರಣವಾಗಿದೆ.
ಇದರೊಂದಿಗೆ ಸಕ್ರಿಯ ಪ್ರಕಣಗಳ ಸಂಖ್ಯೆ 9428ಕ್ಕೆ ಏರಿಕೆಯಾಗಿದ್ದು, 129 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟಾರೆ ಸೋಂಕಿತರ ಸಂಖ್ಯೆ 9,62,339 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಮಂಗಳವಾರ 561 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,40,489 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 6 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,403 ಜನ ಸೋಂಕಿತರು ಮೃತಪಟಟಂತಾಗಿದೆ..
ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಜನರಿಗೆ ಸೋಂಕು ಕಂಡುಬಂದಿದ್ದು, 710 ಜನರಿಗೆ ಸೋಂಕು ತಗುಲಿದೆ. ಮೂವರು ಮೃತಪಟ್ಟಿದ್ದು, 6832 ಸಕ್ರಿಯ ಪ್ರಕರಣಗಳು ಇವೆ.

4.5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement