ಕರ್ನಾಟಕದ ಉಪಚುನಾವಣೆ ದಿನಾಂಕ ಪ್ರಕಟ, ; ಏಪ್ರಿಲ್ 17ಕ್ಕೆ ಮತದಾನ, ಮೇ 2ಕ್ಕೆ ಫಲಿತಾಂಶ

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡಿದೆ.
ರಾಜ್ಯದ ಎರಡು ವಿಧಾನ ಸಭೆ ಮತ್ತು ಒಂದು ಲೋಕ ಸಭಾ ಉಪಚುನಾವಣೆಗೆ ಏಪ್ರಿಲ್‌ 17 ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಬೆಳಗಾವಿ ಲೋಕಸಭಾ ಸ್ಥಾನ ಹಾಗೂ ಬಸವ ಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್‌ ೧೭ರಂದು ಚುನಾವಣೆ ನಡೆಯಲಿದೆ. ಮಂಗಳವಾರದಿಂದಲೇ ಮೂರು ಕ್ಷೇತ್ರಗಳಲ್ಲಿಯೂ ನೀತಿ ಸಂಹಿತೆ ಜಾರಿಯಾಗಿದ್ದು, ನಾಮಪತ್ರ ಸಲ್ಲಿಕೆ ಮಾ.23ಕ್ಕೆ ಆರಂಭವಾಗಲಿದ್ದು, ಮಾರ್ಚ್‌ 31ರೊಳಗೆ ಸಲ್ಲಿಸಬೇಕು. ಮಾ.31ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಏಪ್ರಿಲ್ 3 ಕೊನೆಯ ದಿನಾಂಕವಾಗಿದೆ. ಚುನಾವಣೆಯ ಫಲಿತಾಂಶ ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.
ಮಾಜಿ ಸಚಿವ ಎಂ.ಸಿ.ಮನಗೂಳಿ ನಿಧನದಿಂದ ತೆರವಾದ ಸಿಂಧಗಿ ಕ್ಷೇತ್ರಕ್ಕೆ ಚುನಾವಣಾಚುನಾವಣಾ ಆಯೋಗ ಇನ್ನೂ ದಿನಾಂಕವನ್ನು ಪ್ರಕಟಿಸಿಲ್ಲ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ರೈಲ್ವೆ ಸಚಿವರಾಗಿದ್ದ ಸುರೇಶ ಅಂಗಡಿ ಹಾಗೂ ಬಸವ ಕಲ್ಯಾನ ಕ್ಷೇತ್ರದಲ್ಲಿ ಶಾಸಕರಾಗಿದ್ದ ನಾರಾಯಣ ರಾವ್‌ ಅವರ ನಿಧನದಿಂದ ಸ್ಥಾನ ತೆರವಾಗಿತ್ತು. ಮಸಿಯಲ್ಲಿ ಪ್ರತಾಪ ಗೌಡ ಪಾಟೀಲ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು, ನಂತರ ಅವರು ಅನರ್ಹಗೊಂಡಿದ್ದರಿಂದ ಸ್ಥಾನ ತೆರವಾಗಿತ್ತು.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

 

 

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement