ಕೊರೊನಾ: ಮತ್ತೆ ಕಠಿಣ ನಿಯಮಗಳ ಮುನ್ಸೂಚನೆ ನೀಡಿದ ಆರೋಗ್ಯ ಸಚಿವ..!

ಬೆಂಗಳೂರು: ಕೊರೊನಾ ಬಗ್ಗೆ ಜನ ಎಚ್ಚರಿಕೆ ವಹಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳುವ ಮೂಲಕ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವ ಮುನ್ಸೂಚನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.೧೭ರಂದು ಪ್ರಧಾನಿ ಜೊತೆ ಕೊರೊನಾ ನಿಯಂತ್ರಣದ ಬಗ್ಗೆ ವಿಡಿಯೋ ಸಂವಾದವಿದೆ. ಸಭೆ ಬಳಿಕ ರಾಜ್ಯ ಸರ್ಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ. ಪ್ರಧಾನಿ ಜೊತೆಗಿನ ವಿಡಿಯೋ ಸಂವಾದದಲ್ಲಿ ಕೆಲವು ಸೂಚನೆಗಳು ಸಿಗುವ ಸಾಧ್ಯತೆಯಿದೆ. ಅದಾದ ಬಳಿಕ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಕಳೆದ ಬಾರಿ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲೇ ಮತ್ತೆ ಸೋಂಕು ಹೆಚ್ಚಾಗುತ್ತಿದೆ. ಇದರಲ್ಲಿ ಹೊರರಾಜ್ಯದಿಂದ ಬರುವವರೇ ಸಂಖ್ಯೆ ಹೆಚ್ಚಿದೆ. ಅಲ್ಲದೆ ಗಡಿ ಭಾಗದ ಜಿಲ್ಲೆಗಳಾಗಿರುವುದರಿಂದ ಸೋಂಕು ಸಹಜವಾಗಿ ಹೆಚ್ಚಳವಾಗಿವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜನರು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಇಲ್ಲದಿದ್ದರೆ ಕಠಿಣ ಕ್ರಮ ಅನಿವಾರ್ಯವಾಗುತ್ತದೆ ಎಂಬ ಸಂದೇಶವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ನೀಡಿದ್ದಾರೆ. ದೊಡ್ಡ ದೊಡ್ಡ ಜಾಹಿರಾತು ಮೂಲಕ ಜಾಗೃತಿ ಮೂಡಿಸುವ ಕೆಲವನ್ನೂ ಇಂದಿನಿಂದ ಮಾಡುತ್ತೇವೆ. ಆದರೆಜನರೇ ಎಚ್ಚೆತ್ತರೆ ಈ ಕೆಲಸ ಸುಲಭವಾಗುತ್ತದೆ ಎಂದರು.
ರಾಜ್ಯದಲ್ಲಿ ಲಸಿಕೆ ತೆಗೆದುಕೊಳ್ಳುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇದುವರೆಗೆ 15 ಲಕ್ಷ ಜನರಿಗೆ ಲಸಿಕೆ ನೀಡಿದ್ದೇವೆ. ಪ್ರತಿ ದಿನ ಪ್ರಾಥಮಿಕ ಸರ್ಕಾರಿ ಆಸ್ಪತ್ರೆಗಳಲ್ಲಿ ನೂರು ಜನರಿಗೆ ಟೆಸ್ಟ್ ಮಾಡಲೇಬೇಕು. ಸಾರ್ವಜನಿಕ ಆಸ್ಪತ್ರೆಗಳಲ್ಲಿ 500 ಜನರಿಗೆ ಲಸಿಕೆ ಟಾರ್ಗೆಟ್ ನೀಡಿದ್ದೇವೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement