ಬಿಜೆಪಿಯಲ್ಲೇ ಜಂಗೀ ಕುಸ್ತಿ: ಯತ್ನಾಳ ಹೀಗೆ ಮಾತಾಡಿದ್ರೆ ಉಚ್ಚಾಟನೆಗೆ ಒತ್ತಾಯಿಸ್ಬೇಕಾಗುತ್ತೆ ಎಂದ ರೇಣುಕಾಚಾರ್ಯ

ಚಿತ್ರ ಕೃಪೆ-ಇಂಟರ್ನೆಟ್‌

ಬೆಂಗಳೂರು: : ವಿಧಾನಸೌಧದಲ್ಲಿ ಮಂಗಳವಾರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಪಿ. ರೇಣುಕಾಚಾರ್ಯ, ಯತ್ನಾಳ್ ಅವರೇ ನಾಟಕ ಮಾಡುವುದನ್ನು ಬಿಡಿ, ಏಕೆ ಪದೇ ಪದೆ ಯಡಿಯೂರಪ್ಪ ಕುಟುಂಬದವರನ್ನು ಟಾರ್ಗೆಟ್ ಮಾಡಿಕೊಂಡು ಹೇಳಿಕೆ ನೀಡಿಕೊಂಡು ಓಡಾಡುತ್ತೀರಿ. ನಿಮಗೆ ತಾಕತ್ತಿದ್ದರೆ ದಾಖಲೆ ಬಿಡುಗಡೆ ಮಾಡಿ ಎಂದು ಸವಾಲು ಹಾಕಿದರು.
ಯಡಿಯೂರಪ್ಪ ಬಗ್ಗೆ ಇನ್ಮುಂದೆ ಆರೋಪ ಮಾಡಿದರೆ ಶಾಸಕಾಂಗ ಸಭೆ ಕರೆದು ಯತ್ನಾಳ ಅವರನ್ನ ಉಚ್ಚಾಟನೆ ಮಾಡಬಕು ಎಂದು ಆಗ್ರಹಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಾತನಾಡಿ, ವಿಜಯೇಂದ್ರ ಭ್ರಷ್ಟಾಚಾರ ಮಾಡಿರುವ ದಾಖಲೆ ಇದ್ದರೆ ಯತ್ನಾಳ್ ಬಿಡುಗಡೆ ಮಾಡಲಿ. ಅವರು ಹೀಗೆ ಮುಂದುವರಿದರೆ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸುತ್ತೇವೆ. ಜಗ್ಗದೆ ಬಗ್ಗದೇ ಹೋದರೆ ನಾವು ಏನು ಮಾಡಬೇಕು ಮಾಡುತ್ತೇವೆ ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement