ಭಾರತದಲ್ಲಿ 24,492 ದೈನಂದಿನ ಕೊರೊನಾ ಪ್ರಕರಣಗಳು

ನವ ದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ದೈನಂದಿನ 24,492 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
131 ಜನ ಇದರಿಂದ ಮೃತಪಟ್ಟಿದ್ದು, ಸಾವಿನ ಸಂಖ್ಯೆ 1,56,014ಕ್ಕೆ ಏರಿಕೆಯಾಗಿದೆ.ಸೋಮವಾರ ಒಂದೇ ದಿನ 20,191 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,10,27,543 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,23,432 ಸಕ್ರಿಯ ಪ್ರಕರಣಗಳಿವೆ.
ಭಾರತದಲ್ಲಿ ಒಂದೇ ದಿನ 8,73,350 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದ್ದು, ಡಿ ಈವರೆಗೂ ದೇಶದಲ್ಲಿ 22,82,80,763 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ, 3,29,47,432ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement