ಸಿಡಿ ಪ್ರಕರಣ: ಎಸ್‌ಐಟಿಗೆ ದಾಖಲಿಸಿದ ಜಾರಕಿಹೊಳಿ ಹೇಳಿಕೆಯಲ್ಲಿ ಇರುವುದೇನು?

ಬೆಂಗಳೂರು: ಸಚಿವ ಸ್ಥಾನಕ್ಕೆ ಕಾರಣವಾದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರಿಂದ ವಿಶೇಷ ತನಿಖಾ ತಂಡ ಹೇಳಿಕೆ ದಾಖಲಿಸಿಕೊಂಡಿದೆ.
ಅವರು ನೀಡಿದ ನಾಲ್ಕು ಪುಟಗಳ ಹೇಳಿಕೆಯಲ್ಲಿ ರಮೇಶ್ ಜಾರಕಿಹೊಳಿ ಕೆಲವು ಸ್ಫೋಟಕ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ತಿಳುದಬಂದಿದೆ. ಸದಾಶಿವನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದ ಅಂಶಗಳನ್ನೇ ಆಧಾರವಾಗಿಟ್ಟುಕೊಂಡು ಅವರು ತಮ್ಮ ಹೇಳಿಕೆ ದಾಖಲಿಸಿದ್ದು, ಇದು ನಕಲಿ ಸಿಡಿ ಎಂದು ಅವರು ಪುನರುಚ್ಚರಿಸಿದ್ದಾರೆ.
ನನಗೆ ನಾಲ್ಕು ತಿಂಗಳ ಹಿಂದೆಯೇ ಹಣದ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು. ನನ್ನ ಆಪ್ತ ನಾಗರಾಜ್ ಮೂಲಕ ಹಣಕ್ಕೆ ಪರೋಕ್ಷವಾಗಿ ಬೇಡಿಕೆ ಇಡಲಾಗಿತ್ತು. ಆದರೆ ಅದಕ್ಕೆ ನಾನು ತಲೆ ಕೆಡಿಸಿಕೊಂಡಿರಲಿಲ್ಲ. ರಾಜಕೀಯವಾಗಿ ಮುಗಿಸುವುದಾಗಿ ಹೇಳಿದರೂ ನಾನು ಅವರ ಮಣಿದಿಲ್ಲ. ನನ್ನನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೆಸಿ ಸಿಡಿ ತಯಾರಿಸಿ ಹರಿದು ಬಿಡಲಾಗಿದೆ. ನಾಲ್ಕು ತಿಂಗಳ ಹಿಂದೆಯೇ ನನಗೆ ಆಪ್ತರ ಮೂಲಕ ಸಿಡಿ ವಿಚಾರ ಗೊತ್ತಿತ್ತು. ಅದಕ್ಕಾಗಿ ಐದು ಕೋಟಿ ಬೇಡಿಕೆ ಇಟ್ಟಿದ್ದರು. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ ಎಂದು ಅದಕ್ಕೆ ಆಸ್ಪದ ನೀಡಿರಲಿಲ್ಲ. ಆನಂತರ ನನ್ನ ರಾಜಕೀಯ ಎದುರಾಳಿಗಳು ಷಡ್ಯಂತ್ರ ನಡೆಸಿ ವಿಡಿಯೋ ಬಿಡುಗಡೆ ಮಾಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ನಾನಿಲ್ಲ. ನನ್ನ ವಿರುದ್ಧ ನಕಲಿ ವಿಡಿಯೋ ಸೃಷ್ಟಿಸಿದ್ದಾರೆ. ಇದರಲ್ಲಿ ಹಲವರು ಶಾಮೀಲಾಗಿದ್ದಾರೆ ಎಂದು ಜಾರಕಿಹೊಳಿ ಎಸ್‌ಐಟಿ ಅಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಿದ್ದಾರೆ ಎನ್ನಲಾಗಿದೆ ಆದರೆ, ಯಾವ ರಾಜಕಾರಣಿಯ ಹೆಸರನ್ನು ಸಹ ಹೇಳಿಕೆಯಲ್ಲಿ ದಾಖಲಿಸಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ.
ರಮೇಶ್ ಜಾರಕಿಹೊಳಿ ಅವರ ನಿವಾಸಕ್ಕೆ ತೆರಳಿ ಎಸ್‌ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಶಂಕಿತ ಆರೋಪಿ ಪತ್ನಿಗೆ ನೋಟಿಸ್ : ಜಾರಕಿಹೊಳಿ ಅಶ್ಲೀಲ ಸಿಡಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ವ್ಯಕ್ತಿಯ ಪತ್ನಿಗೆ ವಿಶೇಷ ತನಿಖಾ ತಂಡ ನೋಟಿಸ್ ಜಾರಿ ಮಾಡಿತ್ತು. ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ಹಾಜರಾಗುವಂತೆ ಎಸ್‌ಐಟಿ ಎಸಿಪಿ ಧರ್ಮೇಂದ್ರ ಅವರು ತುಮಕೂರು ಮೂಲದ ವ್ಯಕ್ತಿಯ ಪತ್ನಿಗೆ ರವಾನಿಸಿದ್ದರು. ಆದರೆ, ಆಕೆಯ ಪರವಾಗಿ ವಕೀಲರು ಬಸವನಗುಡಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ : ತಾಯಿ-ಮಗು ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement