
ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕಗಳಿದ್ದ ಎಸ್‌ಯುವಿ ವಾಹನ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಕಚೇರಿ ಮೇಲೆ ಎನ್‌ಐಎ ಮಂಗಳವಾರ ರಾತ್ರೋರಾತ್ರಿ ದಾಳಿ ನಡೆಸಿದ್ದು, ಮರ್ಸಿಡಿಸ್ ಕಾರು, ನಗದು ಹಾಗೂ ಮತ್ತಿತರ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ತಂಡ, ವಾಜೆ ಕಚೇರಿಯಿಂದ ಕೆಲವೊಂದು ದೋಷಾರೋಪಣೆಯ ದಾಖಲೆಗಳು ಮತ್ತು ಲ್ಯಾಪ್‌ಟಾಪ್, ಐಪಾಡ್ ಮತ್ತು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದೆ ಎಂದು ತನಿಖೆ ನಡೆಸುತ್ತಿರುವ ಅಧಿಕಾರಿಗಳು ತಿಳಿಸಿದ್ದಾರೆ.
ವಾಜೆ ಬಳಸುತ್ತಿದ್ದ ಕಪ್ಪು ಬಣ್ಣದ ಮರ್ಸಿಡಿಸ್ ಕಾರನ್ನು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಸ್‌ಎಂಟಿ) ಬಳಿಯ ವಾಹನ ನಿಲುಗಡೆ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದ್ದು, ಲಕ್ಷ ನಗದು, ನೋಟ್ ಎಣಿಸುವ ಯಂತ್ರ, ಎರಡು ನಂಬರ್ ಪ್ಲೇಟ್‌ಗಳು ಮತ್ತು ಕೆಲವು ವಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ. ಸಚಿನ್ ವಾಜೆ ಅವರನ್ನು ಮಾ. 13ರಂದು ಬಂಧಿಸಲಾಗಿತ್ತು.



ನಿಮ್ಮ ಕಾಮೆಂಟ್ ಬರೆಯಿರಿ