ಕೊರೊನಾ: ಕರ್ನಾಟಕದಲ್ಲಿ ಲಾಕ್‌ಡೌನ್‌ ಬಗ್ಗೆ ಹೇಳಿದ್ದೇನೆಂದರೆ…

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೊನಾದಿಂದಾಗಿ ಕಳೆದ ಒಂದು ವರ್ಷದ ಅವಧಿಯಲ್ಲಿ ಸಾಕಷ್ಟು ಪಾಠಗಳನ್ನು ಕಲಿತಿದ್ದೇವೆ. ಕಳೆದ ಬಾರಿ ಇದಕ್ಕೆ ಲಸಿಕೆ ಇರಲಿಲ್ಲ.ಈಗ ಲಸಿಕೆ ಬಂದಿದೆ. ಕೊರೊನಾಕ್ಕೆ ಹೇಗೆ ಚಿಕಿತ್ಸೆ ನೀಡುವುದು ಎಂಬುದು ಸಹ ಗೊತ್ತಾಗಿದೆ. ಆದರೆ ಜನರು ಈ ಬಗ್ಗೆ ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಲೇಬೇಕು ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿದೆ. ಆದರೆ ಸದ್ಯಕ್ಕೆ ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಮಾಡುವುದಿಲ್ಲ. ಇದರ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತೇವೆ ಎಂದು ಡಾ. ಸುದಾಕರ ತಿಳಿಸಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement