ಬೆಂಗಳೂರಲ್ಲಿ ಮೂರು ಕೊವಿಡ್‌ ಆರೈಕೆ ಕೇಂದ್ರ, ರಾಜ್ಯದಲ್ಲಿ ಪ್ರತಿದಿನ ೩ ಲಕ್ಷ ಜನರಿಗೆ ಲಸಿಕೆ: ಸಿಎಂ ಬಿಎಸ್‌ವೈ

ಬೆಂಗಳೂರು: ಬೆಂಗಳೂರು, ಕಲಬುರಗಿ ಮತ್ತು ಬೀದರ್ ಈ ಪ್ರದೇಶಗಳಲ್ಲಿ ಕೊವಿಡ್‌ ಪ್ರಕರಣಗಳಲ್ಲಿ ಹೆಚ್ಚಳವಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಈ ಪ್ರದೇಶಗಳ ಬಗ್ಗೆ ಹೆಚ್ಚು ಗಮನ ಕೊಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಕೆಲವು ರಾಜ್ಯಗಳಲ್ಲಿ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ದೇಶದ ಕೊವಿಡ್‌ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ವಿಡಿಯೋ ಸಮಾವೇಶದ ನಂತರ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಕೆಲವು ರಾಜ್ಯಗಳಲ್ಲಿ ಕೊವಿಡ್‌ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಕಳವಳ ವ್ಯಕ್ತಪಡಿಸಿರುವ ಪ್ರದಾನಿ ಮೋದಿಯವರು ಕರ್ನಾಟಕದಲ್ಲಿ ಬೆಂಗಳೂರು, ಕಲಬುರಗಿ ಹಾಗೂ ಬೀದರ ಪ್ರದೇಶಗಳಲ್ಲಿ ಕೊವಿಡ್‌ ಪ್ರಕರಣಗಳ ಹೆಚ್ಚಳವಾದ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ನಾವು ಮೂರು ಕೋವಿಡ್‌ ಆರೈಕೆ ಕೇಂದ್ರಗಳನ್ನು ತೆರೆಯಲು ನಿರ್ಧರಿಸಿದ್ದೇವೆ. ರಾಜ್ಯದಲ್ಲಿ ಪ್ರತಿದಿನ ೩ ಲಕ್ಷ ಜನರಿಗೆ ಲಸಿಕೆ ನೀಡುತ್ತೇವೆ ಎಂದು ಹೇಳಿದ್ದಾರೆ.
ಯಾವುದೇ ಕರ್ಫ್ಯೂ ಅಥವಾ ರಾತ್ರಿ ನಿಷೇಧವನ್ನು ತಳ್ಳಿಹಾಕಿದ ಅವರು, ಜನರು ಸೂಕ್ತ ಕೊವಿಡ್‌ ಮಾರ್ಗಸೂಚಿಗಳನ್ನು ಪಾಲಿಸಬೇಕು ಮಾಸ್ಕ್‌ಗಳನ್ನು ಬಳಸಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು
. .

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement