ಭಾರತದಲ್ಲಿ 29 ಸಾವಿರ ಸನಿಹ ಬಂದ ಕೊರೊನಾ ದೈನಂದಿನ ಪ್ರಕರಣಗಳ ಸಂಖ್ಯೆ…ಎಚ್ಚರಿಕೆ ಗಂಟೆ…!

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 28,903 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ ಎಂದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಮತ್ತೊಮ್ಮೆ ಎಚ್ಚರಿಕೆ ಗಂಟೆ ಬಾರಿಸಿದೆ.
ಒಂದೇ ದಿನ ಒಂದೇ ದಿನಕೊರೊನಾ ವೈರಸ್ಸಿಗೆ 188 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,14,38,734ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 1,59,044ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಮಂಗಳವಾರ ಒಂದೇ ದಿನ 17,741 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,10,45,284ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,34,406 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಒಂದೇ ದಿನ 9,69,021 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 22,92,49,784 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 3,50,64,536 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಪ್ರಮುಖ ಸುದ್ದಿ :-   ಇಂದು ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ; ಯಲ್ಲೋ ಅಲರ್ಟ್‌

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement