ಮತ್ತೆ ಏರಿಕೆ..ಕರ್ನಾಟಕದಲ್ಲಿ 1488 ದೈನಂದಿನ ಕೊರೊನಾ ಸೋಂಕು..!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಆರ್ಭಟ ಹೆಚ್ಚಾಗುತ್ತಿದ್ದು ಕಳೆದ 24 ತಾಸಿನಲ್ಲಿ ಕೊರೊನಾ ದೈನಂದಿನ ಸೋಂಕು ಗುರುವಾರ ಹೊಸ ಒಂದುಸಾವಿರದ ಸಮೀಪ ಬಂದಿದ್ದು, 1488 ಜನರಿಗೆ ಸೊಂಕು ದೃಢ ಪಟ್ಟಿದೆ.
ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 8 ಸೋಂಕಿತರು ಮೃತಪಟ್ಟಿದ್ದು ಬೆಂಗಳೂರು ನಗರ ದಲ್ಲಿ 7 ಜನರು ಹಾಗೂ ಬೀದರಿನಲ್ಲಿ ಒಬ್ಬರು ಕೊರನಾದಿಂದ ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11 ಸಾವಿರ ಗಡಿದಾಟಿದೆ.
341 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು941309 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ.
ರಾಜ್ಯದಲ್ಲಿ 131 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 925 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿವೆ,

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement