ಆಧಾರ್ ಜೊತೆ ʼವೋಟರ್‌ ಐಡಿʼ ಲಿಂಕ್: ಸರ್ಕಾರದ ಮುಂದೆ ಪ್ರಸ್ತಾವನೆ

ನವ ದೆಹಲಿ: ಆಧಾರ್ ಕಾರ್ಡ್ʼಗೆ ವೋಟರ್‌ ಐಡಿ ಜೋಡಣೆ ಮಾಡುವ ಪ್ರಸ್ತಾವನೆ ಸರ್ಕಾರದ ಪರಿಶೀಲಿನೆಯಲ್ಲಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಉತ್ತರಿಸಿದ ಅವರು, ಮತದಾರರ ಪಟ್ಟಿಯನ್ನ ಆಧಾರ್‌ನೊಂದಿಗೆ ಲಿಂಕ್ ಮಾಡಲು ಚುನಾವಣಾ ಆಯೋಗವು ಉದ್ದೇಶಿಸಿದ್ದು, ಇದರಿಂದ ಒಬ್ಬ ವ್ಯಕ್ತಿ ಬೇರೆ ಬೇರೆ ಸ್ಥಳಗಳ ನೋಂದಣಿ ಮಾಡುವುದನ್ನು ತಡೆಗಟ್ಟಬಹುದು. ಈ ಉದ್ದೇಶದಿಂದ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಆಧಾರ್‌ ಜೊತೆ ಲಿಂಕ್ ಮಾಡಲು ಉದ್ದೇಶಿಸಿದೆ. ಇದಕ್ಕೆ ಚುನಾವಣಾ ಕಾನೂನುಗಳಿಗೆ ತಿದ್ದುಪಡಿ ಅಗತ್ಯ. ಈ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನೀವು ಭಾರತದಲ್ಲಿ ಆಪಲ್ ಸಾಧನ ಉತ್ಪಾದನೆ ಮಾಡ್ಬೇಡಿ..; ಆಪಲ್ ಸಿಇಒಗೆ ಡೊನಾಲ್ಡ್ ಟ್ರಂಪ್ ಒತ್ತಡ : ಅಮೆರಿಕ ವರಸೆ ಬದಲಿಸಿದ್ದು ಯಾಕೆ..?

ನಿಮ್ಮ ಕಾಮೆಂಟ್ ಬರೆಯಿರಿ

advertisement