ಕರ್ನಾಟಕದಲ್ಲಿ ಎರಡನೇ ಅಲೆ ಭೀತಿ: ಆರೋಗ್ಯ ಸಿಬ್ಬಂದಿಗೆ 50 ದಿನ ರಜೆ ಇಲ್ಲ ಎಂದ ಆರೋಗ್ಯ ಸಚಿವರು

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಇನ್ನು 50 ದಿನಗಳು ರಜೆ ನೀಡದಿರಲು ತೀರ್ಮಾನಿಸಲಾಗಿದೆ. ಎಲ್ಲರೂ ಇದಕ್ಕೆ ಸ್ಪಂದಿಸಬೇಕು ಎಂದು ಆರೋಗ್ಯ ಖಾತೆ ಸಚಿವ ಡಾ.ಆರ್‌.ಸುಧಾಕರ ಮನವಿ ಮಾಡಿದ್ದಾರೆ.
ಗುರುವಾರ ಆರೋಗ್ಯ ಇಲಾಖೆ ಅಧಿಕಾರಿಗಳು, ಮುಖ್ಯ ಆಸ್ಪತ್ರೆ ವೈದ್ಯರ ನೇತೃತ್ವದಲ್ಲಿ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಮೀಸಲಿಡುವುದು ಸೇರಿದಂತೆ ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳಲು ನೀಡಲಾಗಿದೆ. ಮೊದಲಿನಂತೆ ಕೋವಿಡ್ ವಾರ್ ರೂಮ್‍ಗ ತೆರೆಯಲಾಗುವುದು. ಇದೇ ವಾರ ಅಪರ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆ ಮಾಲೀಕರ ಜೊತೆ ಈ ಕುರಿತು ಮಾತುಕತೆ ನಡೆಸಲಾಗುವುದು. ಮತ್ತೆ ಸೋಂಕು ಹೆಚ್ಚಾದರೆ ಬೆಡ್ ಮೀಸಲಿಡಲು ಸೂಚನೆ ನೀಡಲಾಗಿದೆ. ಪ್ರತಿಯೊಬ್ಬರಿಗೂ ಜವಾಬ್ದಾರಿ ನೀಡಲಾಗಿದೆ. ಕಂದಾಯ ಇಲಾಖೆಯವರನ್ನೂ ಬಳಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಪಾರದರ್ಶಕವಾಗಿರಲು ರಿಯಲ್ ಟೈಮ್ ಬಳಸಲಾಗುವುದು. ಲೋಪ ಕಂಡು ಬಂದರೆ ಆಯಾ ಇಲಾಖೆ ಮುಖ್ಯಸ್ಥರನ್ನೇ ಹೊಣೆ ಮಾಡಲಾಗುವುದು ಎಂದು ತಿಳಿಸಿದರು.
ವ್ಯಾಕ್ಸಿನ್ ನೀಡುವ ಪ್ರಮಾಣ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ. ಒಂದೇ ದಿನದಲ್ಲಿ ಎರಡು ಲಕ್ಷ ಲಸಿಕೆ ಗುರಿಯನ್ನು 3 ಲಕ್ಷಕ್ಕೆ ಏರಿಸಲಾಗುವುದು. 60 ವರ್ಷ ಮೇಲ್ಪಟ್ಟವರು ಸ್ವಯಂ ಪ್ರೇರಿತರಾಗಿ ಲಸಿಕೆ ಪಡೆಯಲು ಬರಬೇಕು. ಪ್ರತೀ ವಾರ್ಡ್‍ಗೂ ಆಂಬುಲೆನ್ಸ್ ನೀಡಲಾಗುತ್ತದೆ. ಬೆಂಗಳೂರಿನಲ್ಲಿ 200 ಆಂಬುಲೆನ್ಸ್ ಗಳನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ಹೇಳಿದರು.
ಲಸಿಕೆ ಹಾಕಿಸಿಕೊಂಡ ಬಳಿಕ ಸೋಂಕು ಬರುವುದಿಲ್ಲ ಎಂದು ಮಾಸ್ಕ ಮರೆಯಬಾರದು. ಕಡ್ಡಾಯವಾಗಿ ಮಾಸ್ಕ್ ಬಳಸುವುದು, ಗುಂಪು ಸೇರುವುದನ್ನು ಮಾಡಬಾರದು. ಪತ್ರಕರ್ತರಿಗೂ ಗುರುವಾರದಿಂದ ಲಸಿಕೆ ಹಾಕಿಸಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement