ಕಲಬುರಗಿ-ಮುಂಬೈ ವಿಮಾನ ಯಾನ ಮಾರ್ಚ್ 25ರಿಂದ ಆರಂಭ

ಕಲಬುರಗಿ: ಏರ್ ಇಂಡಿಯಾದ ಅಂಗ ಸಂಸ್ಥೆ ಅಲಯನ್ಸ್ ಏರ್ ಇದೇ ಮಾರ್ಚ್ 25ರಿಂದ ಕಲಬುರಗಿ ಹಾಗೂ ಮುಂಬೈ ಮಧ್ಯೆ ವಾರದ ಎಲ್ಲ ದಿನವೂ ನೇರ ವಿಮಾನ ಹಾರಾಟ ಆರಂಭಿಸಲಿದೆ.
ಕಲ್ಯಾಣ ಕರ್ನಾಟಕವನ್ನು ದೇಶದ ವಾಣಿಜ್ಯ ರಾಜಧಾನಿ ಮುಂಬೈಯೊಂದಿಗೆ ಸಂಪರ್ಕಿಸಬೇಕೆನ್ನುವ ಈ ಭಾಗದ ಉದ್ಯಮಿಗಳ ಬೇಡಿಕೆ ಈಡೇರಿದಂತಾಗಿದೆ.
ಮಾ.25ರಿಂದ ನಿತ್ಯ ಬೆಳಿಗ್ಗೆ 7.20ಕ್ಕೆ ಮುಂಬೈನಿಂದ ಹೊರಡುವ 70 ಸೀಟುಗಳ ವಿಮಾನ (9I 665) ಬೆಳಿಗ್ಗೆ 9ಕ್ಕೆ ಕಲಬುರಗಿಗೆ ಬರಲಿದೆ. ಬೆಳಿಗ್ಗೆ 9.25ಕ್ಕೆ ಕಲಬುರಗಿಯಿಂದ ಹೊರಡುವ ವಿಮಾನ (9I 666) ಬೆಳಿಗ್ಗೆ 10.55ಕ್ಕೆ ಮುಂಬೈ ತಲುಪಲಿದೆ.
ವಿಮಾನ ಬುಕ್ಕಿಂಗ್ ಹಾಗೂ ಇತರ ವಿವರಗಳಿಗಾಗಿ www.airindia.in ವೆಬ್‌ಸೈಟ್‌ ಸಂಪರ್ಕಿಸಬಹುದು ಎಂದು ಅಲಯನ್ಸ್ ಏರ್ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಲಯನ್ಸ್ ಏರ್ ಈಗಾಗಲೇ ಕಲಬುರಗಿ ಹಾಗೂ ಕರ್ನಾಟಕ ರಾಜಧಾನಿ ಬೆಂಗಳೂರು ಮಧ್ಯೆ ವಿಮಾನಯಾನ ಸೇವೆ ಆರಂಭಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement