ಭಾರತದಲ್ಲಿ ಒಂದೇ ದಿನದಲ್ಲಿ 36 ಸಾವಿರದ ಸಮೀಪ ಬಂದ ಕೊರೊನಾ ಪ್ರಕರಣ..ಮತ್ತೆ ಬಾರಿಸಿದೆ ಎಚ್ಚರಿಕೆ ಗಂಟೆ..!!

ನವ ದೆಹಲಿ: ದೇಶದಲ್ಲಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದ್ದು, ಕಳೆದ 24 ತಾಸಿನಲ್ಲಿ ಭಾರತದಲ್ಲಿ 35,871 ದೈನಂದಿನ ಕೊರೊನಾ ಪ್ರಕರಣಗಳು ದಾಖಲಾಗಿವೆ..!!

ಇದು ಈ ವರ್ಷದ ಅತಿ ಗರಿಷ್ಠ ದೈನಂದಿನ ಪ್ರಕರಣವಾಗಿದೆ. ಪ್ರ ಒಂದೇ 172 ಜನರು ಇದರಿಂದ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 1,59,216ಕ್ಕೆ ಏರಿಕೆಯಾಗಿದೆ. ಬುಧವಾರ 17,741 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,10,63,025ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,52,364 ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ಒಂದೇ ದಿನ 10,63,379 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 23,03,13,163 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ ನಂತರ ಇಲ್ಲಿಯವರೆಗೂ ಒಟ್ಟಾರೆ 3,71,43,255 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement