ವಿದ್ಯಾರ್ಥಿಗಳಿಗೆ ಕೊರೊನಾ : ಮಣಿಪಾಲದ ಎಂಐಟಿ ಕಂಟೈನ್ಮೆಂಟ್ ಆಗಿ ಘೋಷಣೆ

ಮಣಿಪಾಲ್ : ಕೊರೊನಾ ಪ್ರಕರಣ ಹೆಚ್ಚಳದಿಂದಾಗಿ ಮಣಿಪಾಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕ್ಯಾಂಪಸ್ ಅನ್ನು ಕಂಟೇನರ್ ವಲಯವೆಂದು ಉಡುಪಿ ಜಿಲ್ಲಾ ಆರೋಗ್ಯ ಇಲಾಖೆ ಘೋಷಿಸಿದೆ.
ಕ್ಯಾಂಪಸ್ ನಲ್ಲಿ ಮಾರ್ಚ್ 11 ರಿಂದ 16ರ ನಡುವೆ 59 ವಿದ್ಯಾರ್ಥಿ ಹಾಗೂ ಸಿಬ್ಬಂದಿಗೆ ಕರೋನಾ ವೈರಸ್ ಪ್ರಕರಣಗಳು ವರದಿಯಾದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಪೈಕಿ 27 ಜನರಿಗೆ ಮಾರ್ಚ್ 17ರಂದು ಕೋವಿಡ್ ಪಾಸಿಟಿವ್ ಎಂದು ಪತ್ತೆಯಾಗಿತ್ತು.
ಉಡುಪಿ ಜಿಲ್ಲೆಯ ಮಣಿಪಾಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಬುಧವಾರ 27 ಮಂದಿ ಸೇರಿದಂತೆ 33 ಮಂದಿಗೆ ಕೋವಿಡ್-19 ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲಾ ಆರೋಗ್ಯ ಇಲಾಖೆಯು ಎಂಐಟಿ ಕ್ಯಾಂಪಸ್ ಅನ್ನು ಕಂಟೈನಮೆಂಟ್ ಝೋನ್ ಎಂದು ಘೋಷಿಸಿದೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ನಿಮ್ಮ ಕಾಮೆಂಟ್ ಬರೆಯಿರಿ

advertisement