ರಾಮಾಯಣ ಟೀವಿ ಸೀರಿಯಲ್‌ ಶ್ರೀ‌ರಾಮನ ಪಾತ್ರಧಾರಿ ಅರುಣ್‌ ಗೋವಿಲ್‌ ಬಿಜೆಪಿಗೆ ಸೇರ್ಪಡೆ

ನವ ದೆಹಲಿ:ಪ್ರಖ್ಯಾತ ರಾಮಾಯಣ ಧಾರಾವಾಹಿ ಶ್ರೀರಾಮನ ಪಾತ್ರಧಾರಿ ಅರುಣ್‌ ಗೋವಿಲ್‌ ಗುರುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಪಂಚ ರಾಜ್ಯಗಳ ಚುನಾವಣೆ ಸಂದರ್ಭದಲ್ಲಿ ಅವರು ಬಿಜೆಪಿ ಸೇರುತ್ತಿರುವುದು ಮಹತ್ವ ಪಡೆದಿದೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಅವರು ಸೇಪಡೆಯಾಗಿದ್ದಾರೆ. 1987ರಿಂದ ದೂರದರ್ಶನದಲ್ಲಿ ಪ್ರಸಾರವಾಗಿದ್ದ ರಮಾನಂದ ಸಾಗರ್‌ ಅವರ ಜನಪ್ರಿಯ ಧಾರಾವಾಹಿ ‘ರಾಮಾಯಣ’ದಲ್ಲಿ ಶ್ರೀರಾಮನ ಪಾತ್ರವನ್ನು ಅರುಣ್‌ ಗೋವಿಲ್‌ ನಿರ್ವಹಿಸಿದ್ದ
ರಾಮಾಯಣ ಧಾರಾವಾಹಿಯನ್ನು ಕೊರೊನಾ ವೈರಸ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ, ಪ್ರೇಕ್ಷಕರ ಒತ್ತಾಯದ ಮೇರೆ ದೂರದರ್ಶನದಲ್ಲಿ ಮರು ಪ್ರಸಾರ ಮಾಡಲಾಯಿತು. ಇವರು ಮೂಲತಃ ಉತ್ತರ ಪ್ರದೇಶದ ಮೀರತ್‌ನವರು.

2 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಭಯೋತ್ಪಾದನೆ ವಿರುದ್ಧ ಭಾರತವು ಜಾಗತಿಕವಾಗಿ ತಲುಪುವ ಪ್ರಯತ್ನಕ್ಕೆ ಸ್ಥಳೀಯ ರಾಜಕೀಯ ತರಬೇಡಿ ; ಸಂಜಯ ರಾವತಗೆ ಶರದ್ ಪವಾರ್

ನಿಮ್ಮ ಕಾಮೆಂಟ್ ಬರೆಯಿರಿ

advertisement