ಚೆನ್ನೈ: ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆ ಸಂಪೂರ್ಣವಾಗಿ ರದ್ದು ಮಾಡ್ತೇವೆ. ಅದು ಸಾಧ್ಯವಾಗಿಲ್ಲ ಅಂದರೆ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ನೀಡುತ್ತೇವೆ ಎಂದು ಡಿಎಂಕೆ ಪಕ್ಷದ ಮಾಜಿ ಸಚಿವ ಕೆ.ಎನ್. ನೆಹರೂ ವಿವಾದಾತ್ಮಕ ಹೇಳಿದ್ದಾರೆ.
ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಯಲ್ಲಿ ತಿರುಚ್ಚಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಹಾರ ಮತ್ತು ಮಧ್ಯ ಪ್ರದೇಶ, ಉತ್ತರ ಪ್ರದೇಶಗಳ ಪರೀಕ್ಷೆಗಳಲ್ಲಿ ನಕಲು ಮಾಡಲು ಅವಕಾಶ ನೀಡಿದ್ದಾರೆ. ತಮಿಳುನಾಡಿನ ವಿದ್ಯಾರ್ಥಿಗಳು ಮಾತ್ರ ನಿಸ್ವಾರ್ಥವಾಗಿ ಪರೀಕ್ಷೆ ಬರೆಯುತ್ತಿದ್ದಾರೆ. ನಾವು ಮಾತ್ರ ಏಕೆ ಈ ರೀತಿ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.
ಹೀಗಾಗಿ ತಮಿಳುನಾಡಿನಲ್ಲಿ ಡಿಎಂಕೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಯನ್ನ ಸಂಪೂರ್ಣವಾಗಿ ರದ್ದುಗೊಳಿಸಲಾಗುತ್ತದೆ. ಅದು ಆಗದಿದ್ದರೆ. ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳಿಗೆ ನಕಲಿಗೆ ಅವಕಾಶ ನೀಡುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ