ಈಗ ಎಸಿಬಿಗೂ ಬಂದ ಸಿಡಿ ಪ್ರಕರಣ..!

ಬೆಂಗಳೂರು: ರಾಜ್ಯದ ಸಿಡಿ ಪ್ರಕರಣ ಈಗ ಮತ್ತೊಂದು ಬೆಳವಣಿಗೆ ಕಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ರಾಜ್ಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.
ಸಿಡಿ ಪ್ರಕರಣದಲ್ಲಿ ತಮ್ಮ ಮೇಲೆ ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಆರೋಪಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ವಿರುದ್ಧ ಮಂಜುನಾಥ್ ಎಂಬವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದ್ದಾರೆ.
ಸಿಡಿ ಪ್ರಕರಣ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಐದು ಕೋಟಿ ರೂ. ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ. ಯಾವ ಮೂಲದಿಂದ ಅವರು ಐದು ಕೋಟಿ ರೂ. ಕೊಟ್ಟಿದ್ದಾರೆ. ಯಾರಿಗೆ ಕೊಟ್ಟಿದ್ದಾರೆ ಎಂಬುದು ಸತ್ಯಾಂಶ ಗೊತ್ತಾಗಬೇಕು. ಯಾವ ಆದಾಯದ ಮೂಲದಿಂದ ಅಷ್ಟು ಪ್ರಮಾಣದ ಹಣ ಅವರಿಗೆ ಬಂದಿದೆ ಎಂಬುದರ ಬಗ್ಗೆ ತನಿಖೆ ನಡೆಸಿ ಎಂದು ದೂರುದಾರರು ಕೋರಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement