ಬೆಂಗಳೂರು : ಕೊರೊನಾ ದೈನಂದಿನ ಪ್ರಕರಣದ ಹೆಚ್ಚಳ ಕಂಡುಬಂದ ಬೆನ್ನಲ್ಲೇ ಆರೋಗ್ಯ ಸಚಿವ ಡಾ.ಕೆ.ಸುಧಾಕರ ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮದ ಮುನ್ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಪ್ರಾರಂಭವಾಗಿದ್ದು, ಜನ ಮಾರ್ಗಸೂಚಿಗಳನ್ನು ಕಡ್ಡಾಯ ಪಾಲಿಸಬೇಕಿದೆ ಎಂದು ಅವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಸುಧಾಕರ್, ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹಂತದಲಿದ್ದೇವೆ. ಹೀಗಾಗಿ ಜನರು ಹೆಚ್ಚಾಗಿ ಬಂದು ಲಸಿಕೆ ಹಾಕಿಸಿಕೊಳ್ಳಬೇಕು. ಕೊರೊನಾ ಏರಿಕೆ ತಡೆಯುವುದು ಎಲ್ಲರ ಸಾಮೂಹಿಕ ಜವಾಬ್ದಾರಿ ಎಂದು ಹೇಳಿದ್ದಾರೆ.
ಕೊರೊನಾ ಹೆಚ್ಚಾದರೆ ಕಠಿಣ ನಿಯಮಗಳನ್ನು ಮಾಡಬೇಕಾಗುತ್ತದೆ. ಶುಕ್ರವಾರ (ಮಾ.೧೯) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆ ಚರ್ಚಿಸಿ ಮುಂದಿನ ಕ್ರಮ ತೀರ್ಮಾ ತೆಗೆದುಕೊಳ್ಳುತ್ತೇವೆ. ಸಿನಿಮಾ ಥಿಯೇಟರ್ ಗಳ ವಿಚಾರವನ್ನೂ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ