ಗದಗ: ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥಗೊಂಡ ಮೆಡಿಕಲ್ ಕಾಲೇಜ್‌ ವಿದ್ಯಾರ್ಥಿಗಳು

ಗದಗ: ವಿಷಪೂರಿತ ಆಹಾರ ಸೇವಿಸಿ ಇಲ್ಲಿನ ವೈದ್ಯಕೀಯ ಮಹಾವಿದ್ಯಾಲಯದ ೧೫ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ಎಂಬಿಬಿಎಸ್‌ ಹಾಗೂ ಬಿಎಸ್‌ಸಿ ನರ್ಸಿಂಗ್‌ ವಿಭಾಗದ  ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಅವರಿಗೆಲ್ಲ ಗದಗ ಜಿಮ್ಸ್‌ನಲ್ಲಿರುವ ಶಾರದಾ ಕ್ಯಾಂಟೀನಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟದ ನಂತರ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅಸ್ವಸ್ಥರನ್ನು ಆಸ್ಪತ್ರೆಗೆ ಸೇರಿದ್ದಾರೆ. ದೈನಂದಿನ ಊಟಕ್ಕಿಂತ ಬೇರೆ ರೀತಿಯ ರುಚಿ ಇತ್ತು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ರಾತ್ರಿ ಊಟ ಮಾಡಿ ಮಲಗಿದ ವಿದ್ಯಾರ್ಥಿಗಳಿಗೆ ವಾಂತಿ ಬೇಧಿ ಆರಂಭವಾಗಿದೆ. ಇದರಿಂದ ಸುಸ್ತಾದ ವಿದ್ಯಾರ್ಥಿಗಳನ್ನು ವೈದ್ಯಕೀಯ ಮಹಾವಿದ್ಯಾಲಯದ ಪಕ್ಕದಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.
ಕ್ಯಾಂಟೀನ್ ಸಿಬ್ಬಂದಿಯ ಬೇಜವಾಬ್ದಾರಿಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಇವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ. ಗದಗ ಜಿಮ್ಸ್‌ ನಿರ್ದೇಶಕ ಡಾ.ಪಿ.ಎಸ್‌ ಭೂಸರಡ್ಡಿಯವರು ಶಾರದಾ ಕ್ಯಾಂಟೀನ್ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸದ್ಯ ಶಾರದಾ ಕ್ಯಾಂಟೀನ್‌ ಬಂದ್ ಮಾಡಲಾಗಿದೆ. ಕ್ಯಾಂಟೀನ್‌ ಸಿಬ್ಬಂದಿಯನ್ನು ಗ್ರಾಮೀಣ ಪೋಲಿಸರು ವಿಚಾರಣೆ ನಡೆಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement