ಭಾರತದಲ್ಲಿ 40 ಸಾವಿರ ಸನಿಹಕ್ಕೆ ಬಂದ ದೈನಂದಿನ ಕೊರೊನಾ ಸೋಂಕು..!

ನವ ದೆಹಲಿ: ಶುಕ್ರವಾರ ಬೆಳಿಗ್ಗೆ 8 ಕ್ಕೆ ಕೊನೆಗೊಂಡ ಕೊನೆಯ 24 ಗಂಟೆಗಳಲ್ಲಿ ಭಾರತದಲ್ಲಿ 39,726 ಕೊರೊನಾ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಯಲ್ಲಿ 154 ಜನರು ಇದಕ್ಕೆ ಮೃತಪಟ್ಟಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,15,14,331ಕ್ಕೆ ಏರಿಕೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 1,59,370 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,71,282 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು ಕಳೆದ 24 ಗಂಟೆಯಲ್ಲಿ 20,654 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,10,83,679 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ 3,93,39,817 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕನ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement