ಸಿಡಿ ಪ್ರಕರಣ ಬಯಲಾದ 24 ತಾಸಿನೊಳಗೆ ನೈತಿಕವಾಗಿ ರಾಜೀನಾಮೆ ಪಡೆಯುವುದು ಬಿಜೆಪಿ ಮಾತ್ರ

ಬೆಂಗಳೂರು: ಸಿಡಿ ಪ್ರಕರಣ ಬಯಲಾದ 24 ಗಂಟೆಯೊಳಗೆ ಬಿಜೆಪಿಯಲ್ಲಿ ಮಾತ್ರ ನೈತಿಕವಾಗಿ ರಾಜೀನಾಮೆ ಪಡೆಯಲಾಗುತ್ತದೆ. ಆರೋಪ ಬಂದಾಗ ನೈತಿಕವಾಗಿ ಸ್ವತಃ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಮೂರು ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಅರುಣ್ ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಈ ವಿಚಾರದಲ್ಲಿ ಗೊಂದಲ‌ ಸೃಷ್ಟಿಸುತ್ತಿದೆ. ಸಿಡಿ ಪ್ರಕರಣದಲ್ಲಿ ಆರೋಪ ಕೇಳಿಬಂದ ಕೂಡಲೇ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಲಾಯ್ತು. ಆರೋಪ ಬಂದ ತಕ್ಷಣ ಈ ತರ ರಾಜೀನಾಮೆ ಬಿಜೆಪಿಯಲ್ಲಿ ಮಾತ್ರ ಪಡೆಯುತ್ತದೆ. ಆದರೆ ಕಾಂಗ್ರೆಸ್ ರಾಜಕೀಯವಾಗಿ ಸಿಡಿ ಪ್ರಕರಣ ಬಳಸಿಕೊಳ್ಳುತ್ತಿದೆ. ಸಿಡಿ ಕುರಿತು ಸುಳ್ಳು ಹೇಳ್ತಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದರು.
ಆರು ಸಚಿವರು ಕೋರ್ಟ್ ಗೆ ಅರ್ಜಿ ಹಾಕಿ ತಡೆ ತಂದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆರು ಸಚಿವರು ಕೋರ್ಟ್ ಗೆ ಹೋಗಿದ್ದು ತಮ್ಮ ವಿರುದ್ಧ ತೇಜೋವಧೆ ಮಾಡಬಹುದು ಎಂದು. ಅವರ ವಿರುದ್ಧ ಷಡ್ಯಂತ್ರ ತಡೆಯಲು ಕೋರ್ಟ್ ಗೆ ಹೋಗಿದ್ದಾರೆ ಎಂದರು.

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement