ಸುಪ್ರೀಂ ಕೋರ್ಟಿನಲ್ಲಿ ಮಾ .24ರಂದು ಹೊಸ ಚುನಾವಣಾ ಬಾಂಡ್‌ ಮಾರಾಟ ಅರ್ಜಿ ವಿಚಾರಣೆ

ನವ ದೆಹಲಿ: ಏಪ್ರಿಲ್ 1 ರಿಂದ ಹೊಸದಾಗಿ ಚುನಾವಣಾ ಬಾಂಡ್ ಗಳ ಮಾರಾಟಕ್ಕೆ ಮಧ್ಯಂತರ ತಡೆ ಕೋರಿ ಎನ್ ಜಿಒ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸಲ್ಲಿಸಿದ್ದ ಅರ್ಜಿಯನ್ನು ಮಾರ್ಚ್ 24 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ತಿಳಿಸಿದೆ.
ಎಡಿಆರ್ ಪರವಾಗಿ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್, ತುರ್ತು ವಿಚಾರಣೆಗೆ ಅನುಮತಿ ಕೋರಿದರು. 2017 ರ ಸೆಪ್ಟೆಂಬರ್ ನಿಂದ ಈ ಅರ್ಜಿ ನ್ಯಾಯಾಲಯದಲ್ಲಿ ಬಾಕಿ ಇದೆ ಎಂದು ತಿಳಿಸಿದರು.
ನಾಲ್ಕು ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಅರ್ಜಿಯನ್ನು ಆರಂಭಿಕ ವಿಚಾರಣೆಗೆ ಪಟ್ಟಿ ಮಾಡಲಾಗಿದೆ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ನ್ಯಾಯಪೀಠ ತಿಳಿಸಿತು.
ಕೇಂದ್ರ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ (ಎಸ್ ಜಿ) ತುಷಾರ್ ಮೆಹ್ತಾ ಮುಂದಿನ ವಾರ ವಿಚಾರಣೆಗೆ ಹಾಜರಾಗಲು ಯಾವುದೇ ಆಕ್ಷೇಪವಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಹಣಕಾಸು ಕಾಯ್ದೆ 2017 ರ ಮೂಲಕ ಪರಿಚಯಿಸಲಾದ ಚುನಾವಣಾ ಬಾಂಡ್ ಅನ್ನು ರಾಜಕೀಯ ಪಕ್ಷಗಳಿಗೆ ಧನಸಹಾಯ ನೀಡುವ ಉದ್ದೇಶದಿಂದ ನಿರ್ದಿಷ್ಟವಾಗಿ ನೀಡಬಹುದು. ಇದನ್ನು ಯಾವುದೇ ವ್ಯಕ್ತಿ, ಕಂಪನಿ, ಸಂಸ್ಥೆ ಅಥವಾ ದೇಶದ ವ್ಯಕ್ತಿಗಳ ಸಂಘದಿಂದ ಪ್ರಾಮಿಸರಿ ನೋಟ್ ಅಥವಾ ಬೇರರ್ ಬಾಂಡ್ ಆಗಿ ಖರೀದಿಸಬಹುದು. ಈವರೆಗೆ ದೇಶದಲ್ಲಿ 6,500 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಚುನಾವಣಾ ಬಾಂಡ್ ಗಳು ಮಾರಾಟವಾಗಿವೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement