ಅನಿಲ ದೇಶಮುಖ್‌ ರಾಜೀನಾಮೆಗೆ ಬಿಜೆಪಿ ಒತ್ತಾಯ

ಮುಂಬೈ ಮಹಾರಾಷ್ಟ್ರದ ರಾಜಕಾರಣ ಹೊಸ ತಿರುವು ಪಡೆದುಕೊಳ್ಳುತ್ತಿದೆ. ರಾಜ್ಯ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರು ಸಚಿನ್ ವಾಜ್ ಅವರಿಗೆ ಪ್ರತಿ ತಿಂಗಳು 100 ಕೋಟಿ ರೂ. ಸಂಗ್ರಹಿಸುವಂತೆ ಒತ್ತಡ ಹೇರಿದ್ದಾಗಿ ಪರಮ್ ಬೀರ್ ಸಿಂಗ್ ಪತ್ರ ಬರೆದ ನಂತರ ಬಿಜೆಪಿ ಅನಿಲ ದೇಶಮುಖ ಅವರನ್ನು ಸಂಪುಟದಿಂದ ವಜಾಗೊಳಿಸಲು ಒತ್ತಾಯಿಸಿದೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕ (ಲೋಪಿ) ದೇವೇಂದ್ರ ಫಡ್ನವಿಸ್ ಗೃಹ ಸಚಿವ ಅನಿಲ್ ದೇಶ್ ಮುಖ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಒಂದು ವೇಳೆ ಅನಿಲ್ ದೇಶಮುಖ್ ರಾಜೀನಾಮೆ ನೀಡದಿದ್ದರೆ ಅವರನ್ನು ಗೃಹ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ನಾಯಕ ಫಡ್ನವೀಸ್ ಹೇಳಿದ್ದಾರೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಗ್ರಹಿಸಿರುವ ಫಡ್ನವೀಸ್, ಸಿಎಂ ಉದ್ಧವ್ ಠಾಕ್ರೆ ಪತ್ರದ ಬಗ್ಗೆಯೂ ಪ್ರಶ್ನಿಸಿದ್ದಾರೆ.
ಪರಮ್ ಬೀರ್ ಸಿಂಗ್ ಅವರ ಪತ್ರವನ್ನು ಉಲ್ಲೇಖಿಸಿದ ಫಡ್ನವೀಸ್, ‘ಈ ಬಗ್ಗೆ ಸಿಎಂಗೆ ಈ ಹಿಂದೆಯೇ ಮಾಹಿತಿ ನೀಡಿದ್ದರು, ಆದರೂ ಅವರು ಏಕೆ ಈ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ ‘ ಎಂದು ಪ್ರಶ್ನಿಸಿದ್ದಾರೆ.
ಆಂಟಿಲಿಯಾ ಬಾಂಬ್ ಮತ್ತು ಮನ್ಸುಖ್ ಹಿರೆನ್ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಾಝೆ ಅವರನ್ನು ಮಹಾರಾಷ್ಟ್ರ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಈ ಹಿಂದೆಯೂ ಆರೋಪಿಸಿದ್ದರು.

ಪ್ರಮುಖ ಸುದ್ದಿ :-   ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement