ಆದಿತ್ಯ ಠಾಕ್ರೆಗೆ ಕೊರೊನಾ ಸೋಂಕು

ಮುಂಬೈ: ಮಹಾರಾಷ್ಟ್ರ ಪರಿಸರ ಖಾತೆ ಸಚಿವ ಆದಿತ್ಯ ಠಾಕ್ರೆ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರಿಗೆ ಶನಿವಾರ ಕೊವಿಡ್‌ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್‌ ಮಾಡಿರುವ ಸಚಿವ ಆದಿತ್ಯ ಠಾಕ್ರೆ, ಕೋವಿಡ್‌ನ ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದು, ನಾನು ಪರೀಕ್ಷಿಸಿಕೊಂಡಿದ್ದೇನೆ ಮತ್ತು ಪರೀಕ್ಷೆಯಲ್ಲಿ ಕೊವಿಡ್‌ ಪಾಸಿಟಿವ್‌ ದೃಢಪಟ್ಟಿದೆ. ಹೀಗಾಗಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ತಮ್ಮನ್ನು ತಾವು ಪರೀಕ್ಷಿಸಿಕೊಳ್ಳುವಂತೆ ವಿನಂತಿಸುತ್ತೇನೆ ಎಂದು ಬರೆದಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ : ಸ್ವಾತಿ ಮಲಿವಾಲ್ ಹೊಸ ವೀಡಿಯೊ ಬಿಡುಗಡೆ ಮಾಡಿದ ಎಎಪಿ : ನಿಜವಾಗಿ ನಡೆದದ್ದು ಏನು..?

ನಿಮ್ಮ ಕಾಮೆಂಟ್ ಬರೆಯಿರಿ

advertisement