ಪಾಕಿಸ್ತಾನದಲ್ಲಿ ಹಿಂದೂ ಪತ್ರಕರ್ತನ ಹತ್ಯೆ

ಕರಾಚಿ: ಪಾಕಿಸ್ತಾನದ ಸಿಂಧ್‌ ಪ್ರಾಂತದಲ್ಲಿ ಹಿಂದೂ ಪತ್ರಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಡೆದಿದೆ.
ಸ್ಥಳಿಯ ಸುದ್ದಿವಾಹಿನಿ ಹಾಗೂ ಉರ್ದು ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಜಯ್‌ ಲಾಲವಾನಿ ಎಂಬ ಪತ್ರಕರ್ತರನ್ನು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಅವರು ಕ್ಷೌರದಂಗಡಿಯಲ್ಲಿ ಕುಳಿತ ಸಂದರ್ಭದಲ್ಲಿ ದಾಳಿ ನಡೆಸಲಾಗಿದೆ. ಕೈ, ಹೊಟ್ಟೆ ಹಾಗೂ ಮೊಣಕಾಲಿಗೆ ಗುಂಡು ತಗುಲಿ ಗಾಯಗಳಾಗಿವೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ವೈಯಕ್ತಿಕ ವೈಷಮ್ಯವೇ ಇದಕ್ಕೆ ಕಾರಣವಾಗಿರಬಹುದೆಂದು ಪೊಲೀಸರು ಸಂಶಯವ್ಯಕ್ತಪಡಿಸಿದ್ದಾರೆ. ಆದರೆ ತಮ್ಮ ಪುತ್ರನಿಗೆ ಯಾರೊಂದಿಗೂ ದ್ವೇಷ ಇರಲಿಲ್ಲ ಎಂದು ಮೃತ ವ್ಯಕ್ತಿಯ ತಂದೆ ದಿಲೀಪ್‌ಕುಮಾರ ಲಾಲವಾನಿ ತಿಳಿಸಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement