ಭಾರತದಲ್ಲಿ ಮತ್ತೆ ಕೊರೊನಾ ಹೆಚ್ಚಳ…40,953 ತಲುಪಿದ ದೈನಂದಿನ ಸೋಂಕು..!!

ನವ ದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಾಗುತ್ತಿದೆ. ಕಳೆದ 24 ತಾಸಿನಲ್ಲಿ 40,953 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಮದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕಳೆದ ನವೆಂಬರ್‌ 28ರ ನಂತರ ಇದು ಅತಿ ಹೆಚ್ಚಿನ ಪ್ರಕರಣವಾಗಿದೆ. ಕೊರೊನಾ ದೇಶಾದ್ಯಂತ ಮತ್ತೆ ಎಚ್ಚರಿಕೆ ಗಂಟೆ ಬಾರಿಸುತ್ತಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ತಾಸಿನಲ್ಲಿ 188 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2.8 ಲಕ್ಷ ದಾಟಿದೆ.
ಶೇ.೬೦ರಷ್ಟು ಪ್ರಕರಣಗಳು ಮಹಾರಾಷ್ಟ್ರದಿಂದಲೇ ದಾಖಲಾಗುತ್ತಿವೆ. ಅಲ್ಲಿ ಶುಕ್ರವಾರ ೨೫ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ನಂತರ ಮಧ್ಯಪ್ರದೇಶ, ಕರ್ನಾಟಕ, ತಮಿಳುನಾಡು ಸೇರಿದಂತೆ ಕೆಲ ರಾಜ್ಯಗಳು ಸಾವಿರದ ಆಸುಪಾಸು ಪ್ರಕರಣಗಳನ್ನು ದಾಖಲಿಸಿವೆ.
10 ದಿನಗಳ ಕಾಲ ಭಾರತ ಪ್ರತಿದಿನ 20 ಸಾವಿರಕ್ಕೂ ಹೆಚ್ಚು ಹೊಸ ಸೋಂಕುಗಳನ್ನು ದಾಖಲಿಸುತ್ತಿದೆ. ದೈನಂದಿನ ಪ್ರಕರಣಗಳು ಮತ್ತು ದೈನಂದಿನ ಚೇತರಿಕೆಗಳ ನಡುವಿನ ಅಂತರವು ಹೆಚ್ಚಳವಾಗುತ್ತಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿಯೂ ಹೆಚ್ಚಳವಾಗುತ್ತಿದೆ. . ಕಳೆದ 24 ಗಂಟೆಗಳಲ್ಲಿ 23,653 ಚೇತರಿಕೆ ಕಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ,

ಪ್ರಮುಖ ಸುದ್ದಿ :-   ದ್ವೇಷ ಭಾಷಣ : ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ ; ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement