ಕೊರೊನಾ ಹೆಚ್ಚಳ: ಶಾಲಾ-ಕಾಲೇಜುಗಳ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಳವಾಗುತ್ತಿದೆ. ಹೀಗಾಗಿ ಶಾಲಾ-ಕಾಲೇಜುಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ನಾವು ಮಕ್ಕಳ ಆರೋಗ್ಯದ ಬಗ್ಗೆ ಗಮನ ಕೊಡಬೇಕಾಗುತ್ತದೆ. ಮಕ್ಕಳ ಭವಿಷ್ಯ ದೃಷ್ಟಿಯಿಂದ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಒಮ್ಮೆ ಕೊರೊನಾ ಹೆಚ್ಚಾದರೆ ಸರ್ಕಾರದಿಂದ ನಿಯಂತ್ರಣ ಸಾಧ್ಯವಿಲ್ಲ. ಹೀಗಾಗಿ ನಿಯಮಗಳನ್ನು ಪಾಲಿಸಲೇ ಬೇಕಿದೆ. ಸರ್ಕಾರ ಲಸಿಕೆ ನೀಡಬಹುದು. ಆದರೆ ಜನರು ಕೋವಿಡ್ ನಿಯಮಗಳನ್ನು ಪಾಲಿಸದಿದ್ದರೆ ಅದನ್ನು ಹೇಗೆ ನಿಯಂತ್ರಿಸಲು ಸಾಧ್ಯ? ಈಗಲೇ ಜನ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಎಲ್ಲರೂ ಕೊವಿಡ್‌ ನಿಯಮಗಳನ್ನು ಪಾಲಿಸಬೇಕು. ಹಿರಿಯ ನಾಗರಿಕರಿಗೆ ಲಸಿಕೆ ಕೊಡುವ ಕೆಲಸ ಮಾಡಬೇಕು. ಪಾರ್ಟಿ, ಜಾತ್ರೆ ಎಂದು ರಿಯಾಯಿತಿ ನೀಡುವುದಿಲ್ಲ. ಜನರು ಅನಗತ್ಯ ಚಟುವಟಿಗಳಿಗೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement