ಭಾರತದಲ್ಲಿ 44 ಸಾವಿರ ಸಮೀಪಕ್ಕೆ ನೆಗೆದ ದೈನಂದಿನ ಕೊರೊನಾ ಸೋಂಕು…!

ನವ ದೆಹಲಿ: ದೇಶದಲ್ಲಿ ಮತ್ತೆ ಕೊರೋನಾ ಸ್ಫೋಟಗೊಂಡಿದ್ದು, ಕಳೆದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 43,846 ಹೊಸ ಪ್ರಕರಣಗಳು ದಾಖಲಾಗಿವೆ. ಇದು ಕಳೆದ ವರ್ಷದ 112 ದಿನಗಳ ಗರಿಷ್ಠ ಸಂಖ್ಯೆಯಾಗಿದೆ.
ಇದೇ ಸಮಯದಲ್ಲಿ ದಿನವೊಂದರಲ್ಲಿ 197 ಕೊವಿಡ್‌ ಮರನಗಳು ಸಂಭವಿಸಿವೆ.
ಪ್ರಮುಖವಾಗಿ ಮಹಾರಾಷ್ಟ್ರದಲ್ಲಿ ಪ್ರಕರಣ ಹೆಚ್ಚಳವಾಗಿದ್ದು ದೇಶದಲ್ಲಿ ಒಟ್ಟಾರೆ ಪ್ರಕರಣಗಳು ಹೆಚ್ಚಲು ಕಾರಣವಾಗಿದ್ದರೆ ಉಳಿದಂತೆ ದೆಹಲಿ, ಪಂಜಾಬ್, ಕರ್ನಾಟಕ, ಗುಜರಾತ್, ತಮಿಳುನಾಡು, ಮಧ್ಯಪ್ರದೇಶ ಮತ್ತು ಹರಿಯಾಣ ರಾಜ್ಯಗಳಲ್ಲಿ ದೈನಂದಿನ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.
ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಮಹಾರಾಷ್ಟ್ರ (ಶೇ.62), ಕೇರಳ (ಶೇ.8.8), ಪಂಜಾಬ್ (ಶೇ.5.3) ನಲ್ಲಿ ಶೇ.76.22ರಷ್ಟು ಪ್ರಕರಣಗಳಿವೆ. ಈ ನಡುವೆ ಕೇರಳದಲ್ಲಿ ಸೋಂಕು ಪ್ರಮಾಣ ತಗ್ಗುತ್ತಿದೆ ಎಂದು ವರದಿಯಾಗಿದೆ.
ಫೆಬ್ರವರಿ 15ರಂದು ಕೇವಲ 1.35 ಲಕ್ಷಕ್ಕೆ ಇಳಿದಿದ್ದ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ ಇದೀಗ 3,09,087ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕಳೆದ 4 ದಿನಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗಿವೆ. ಭಾರತದಲ್ಲಿ ಈ ವರೆಗೆ 1,15,99,130 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಇವರಲ್ಲಿ 1,11,30,288 ಜನರು ಗುಣಮುಖರಾಗಿದ್ದಾರೆ. ಭಾರತದಲ್ಲಿ ಒಂದೇ ದಿನ 11,33,602 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ. ದೇಶದಲ್ಲಿ 23,35,65,119 ಜನರಿಗೆ ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 4,46,03,841 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಪ್ರಮುಖ ಸುದ್ದಿ :-   ಆಗ್ರಾದಲ್ಲಿ ತಾಜ್ ಮಹಲಿಗೇ ಸ್ಪರ್ಧೆ ಒಡ್ಡುವ ಬಿಳಿ ಅಮೃತಶಿಲೆಯ ಮತ್ತೊಂದು ʼಅದ್ಭುತʼ ನಿರ್ಮಾಣವೇ ಈ ‘ಸೋಮಿ ಬಾಗ್’...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement