ಶಿವಮೊಗ್ಗ: ಸಚಿವ ಸ್ಥಾನ ದೊರೆಯದ ಕಾರಣಕ್ಕೆ ಎಚ್.ವಿಶ್ವನಾಥ ಬಿಜೆಪಿ ಸೇರಿದ್ದರ ಕುರಿತು ಅಸಮಾಧಾನವಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ತಪ್ಪು ಮಾಡಿದ್ದರೆ ಅದನ್ನು ತಿಳಿಸಲಿ, ಅದನ್ನು ಬಿಟ್ಟು ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಸರಿಯಿದ್ದರೆ ಆ ಪಕ್ಷಗಳನ್ನು ಯಾಕೆ ಬಿಟ್ಟು ಬಂದಿದ್ದು ಯಾಕೆ? ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಕ್ಷೇತ್ರಗಳಿಗೆ ಹೆಚ್ಚು ಅನುದಾನ ನೀಡಿದ ಬಗ್ಗೆ ವಿಶ್ವನಾಥ ಆಕ್ಷೇಪಿಸಿದ್ದಾರೆ. ಯಾವುದೇ ಕ್ಷೇತ್ರಕ್ಕೆ ಅನುದಾನ ನೀಡಿದರೂ ಅದರಿಂದ ಕ್ಷೇತ್ರದ ಜನರಿಗೆ ಅನುಕೂಲವಾಗುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ರೈತರು ತಮ್ಮ ಬೇಡಿಕೆ ಈಡೇರಿಕೆಗಾಗಿ ಮಹಾಪಂಚಾಯತ್ ನಡೆಸುವುದರಲ್ಲಿ ಯಾವುದೇ ತೊಂದರೆಯಿಲ್ಲ. ಆದರೆ ಕಾಂಗ್ರೆಸ್ ರೈತರ ಹೆಸರಿನಲ್ಲಿ ಪಂಚಾಯತ್ಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪ ಮಾಡಿದರು.
ನಿಮ್ಮ ಕಾಮೆಂಟ್ ಬರೆಯಿರಿ